ಅಬಕಾರಿ ಸಚಿವ ಸ್ಥಾನಕ್ಕೆ ಎಚ್.ನಾಗೇಶ್​ ರಾಜೀನಾಮೆ!!

ಬೆಂಗಳೂರು :

    ಇಂದು ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದ ಬೆನ್ನಲ್ಲೇ, ಅಬಕಾರಿ ಸಚಿವ ನಾಗೇಶ್​ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

     ಸಿಎಂ ಬಿಎಸ್‌ ಯಡಿಯೂರಪ್ಪ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ರಾಜೀನಾಮೆ ನೀಡುವಂತೆ ಯಡಿಯೂರಪ್ಪ ಸೂಚನೆ ನೀಡಿದರು. ಇದಕ್ಕೆ ಕೊನೆಗೂ ಒಪ್ಪಿಗೆ ಸೂಚಿಸಿರುವ ನಾಗೇಶ್ ಅಬಕಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಿಎಂ ಯಡಿಯೂರಪ್ಪ ನೇತೃತ್ವದ ಸಂಪುಟದಿಂದ ಹೊರ ಬಂದಿದ್ದಾರೆ.

      ಈ ಕುರಿತಾಗಿ ವಿಧಾನಸೌಧದಲ್ಲಿ ಮಾತನಾಡಿದ ಹೆಚ್‌.ನಾಗೇಶ್, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಆದರೆ ರಾಜೀನಾಮೆಗೆ ಕಾರಣ ಗೊತ್ತಿಲ್ಲ. ಸಚಿವ ಸ್ಥಾನಕ್ಕೆ ಸಮಾನಾಂತರ ಹುದ್ದೆ ಕೊಡುತ್ತಾರೆ ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕಾರಣಕ್ಕಾಗಿ ಮನಪೂರ್ವಕವಾಗಿ ಒಪ್ಪಿಗೆ ನೀಡಿದ್ದೇನೆ ಎಂದು ತಿಳಿಸಿದರು.

      ಸಿಎಂ ಬಿಎಸ್​ವೈ ಅವರು ನಾಗೇಶ್​ರಿಂದ ರಾಜೀನಾಮೆ ಪಡೆದು ಒಂದು‌ ಸ್ಥಾನ ಖಾಲಿ ಉಳಿಸಿಕೊಳ್ಳುವ ಪ್ಲಾನ್​ ಮಾಡಿದ್ದಾರೆ. ಬಜೆಟ್​ ನಂತರ ಮತ್ತೊಂದು ಬಾರಿ ಸಂಪುಟ ಪುನರ್ ರಚನೆಗೆ ಸಿಎಂ ಯೋಜನೆ ರೂಪಿಸಿಕೊಂಡಿದ್ದು, ಮೂಲ ಬಿಜೆಪಿಯ 6ರಿಂದ 7 ಸಚಿವರನ್ನು ಕೈ ಬಿಟ್ಟು ಹೊಸಬರಿಗೆ ಮಣೆಹಾಕಲು ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ