ಬೆಂಗಳೂರು:
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಅಂಗೀಕರಿಸದಿದ್ದರೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜೆಡಿಎಸ್ ಪಕ್ಷ ರಾಜ್ಯಾಧ್ಯಕ್ಷರಾದ ಹೆಚ್.ವಿಶ್ವನಾಥ್ ಅವರು ತಮ್ಮ ಸ್ಥಾನಕ್ಕೆ ನೀಡಿರುವ ರಾಜೀನಾಮೆ ನೀಡಿರುವುದನ್ನು ಕೂಡಲೇ ಅಂಗೀಕಾರ ಮಾಡಬೇಕು ಇಲ್ಲವಾದ್ರೆ ನಾನು ನನ್ನ ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲು ಚಿಂತನೆ ನಡೆಸುವುದಾಗಿ ತಿಳಿಸಿದ್ದಾರೆ.
ಇದೇ ವೇಳೆ ಅವರು ಮಾತನಾಡುತ್ತ, ಎಚ್.ಡಿ. ಕುಮಾರಸ್ವಾಮಿ ಸಿಎಂ ಹುದ್ದೆಯ ಜೊತೆಗೆ ರಾಜ್ಯಾಧ್ಯಕ್ಷ ಸ್ಥಾನವನ್ನೂ ವಹಿಸಿಕೊಳ್ಳುವುದು ಪಕ್ಷದ ಹಿತದೃಷ್ಟಿಯಿಂದ ಒಳ್ಳೆಯದು. ಹಿಂದೆ ಎಸ್ಎಂ ಕೃಷ್ಣ ಹಾಗೂ ದೇವರಾಜ ಅರಸ್ ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರಿದಿದ್ದರು. ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷ ಸ್ಥಾನವನ್ನು ನಿಭಾಯಿಸುವ ಸಾಮರ್ಥ್ಯ ಕುಮಾರಸ್ವಾಮಿ ಅವರಿಗಿದೆ. ಹೀಗಾಗಿ ತಮ್ಮ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ಮಾಧ್ಯಮದ ಮೂಲಕ ಮನವಿ ಮಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/03/vishwanathB_vb_14.gif)