ಹೊಸಪೇಟೆ:
ಕಮಲಾಪುರದ ಕನ್ನಡ ವಿವಿಯ ಹಾಸ್ಟೆಲ್ ನಲ್ಲಿ ಸೋಮವಾರ ರಾತ್ರಿ ಊಟ ಮಾಡಿದ ಬಳಿಕ 40 ಮಂದಿ ವಿದ್ಯಾರ್ಥಿನಿಯರು ತೀವ್ರವಾಗಿ ಅಸ್ವಸ್ಥಗೊಂಡು 6 ಜನರ ಸ್ಥಿತಿ ಗಂಭೀರವಾಗಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.
ವಿದ್ಯಾರ್ಥಿನಿಯರು ರಾತ್ರಿ ಮಜ್ಜಿಗೆ ಸೇವಿಸಿದ ಬಳಿಕ ವಿದ್ಯಾರ್ಥಿನಿಯರಿಗೆ ವಾಂತಿ ಮತ್ತು ಬೇಧಿ ಕಾಣಿಸಿಕೊಂಡಿದೆ. ಪಿಎಚ್‌ಡಿ ವ್ಯಾಸಂಗಕ್ಕಾಗಿ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದ ವಿದ್ಯಾರ್ಥಿನಿಯರು ಎಂದು ತಿಳಿದು ಬಂದಿದೆ. ಹೊಸಪೇಟೆ ಮತ್ತು ಕಮಾಲಾಪುರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಕುಲಪತಿ ಡಾ.ಸ.ಚಿ.ರಮೇಶ್ ಅವರು ಆಸ್ಪತ್ರೆಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ