ದೆಹಲಿ:
ಸಾರ್ವಜನಿಕ ಸಭೆಯೊಂದರಲ್ಲಿ ಕಾರ್ಯಕರ್ತನೊಬ್ಬ ಕಾಂಗ್ರೆಸ್ ಮುಖಂಡ, ಪಾಟೀದಾರ್ ಸಮುದಾಯದ ಹೋರಾಟಗಾರ ಹಾರ್ದಿಕ್ ಪಟೇಲ್‌ಗೆ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.
ಗುಜರಾತ್‌ನ ಸುರೇಂದ್ರನಗರದಲ್ಲಿ ನಡೆದ ಜನಾಕ್ರೋಶ ಸಭೆಯಲ್ಲಿ ಹಾರ್ದಿಕ್ ಪಟೇಲ್ ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಕಾರ್ಯಕರ್ತನೊಬ್ಬ ಕಪಾಳಮೋಕ್ಷ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
#WATCH Congress leader Hardik Patel slapped during a rally in Surendranagar,Gujarat pic.twitter.com/VqhJVJ7Xc4
— ANI (@ANI) April 19, 2019
ಬಳಿಕ ಕಪಾಳಮೋಕ್ಷ ಮಾಡಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಘಟನೆ ಸಂಬಂಧ ಹಾರ್ದಿಕ ಪಟೇಲ್ ಸಹ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಲೋಕಸಭೆ ಚುನಾವಣೆ ಎರಡು ಹಂತದಲ್ಲಿ ಮುಕ್ತಾಯಗೊಂಡಿದೆ. ಗುಜರಾತ್‌ನಲ್ಲಿ ಏ.23 ರಂದು 14 ರಾಜ್ಯ, 115 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಚುನಾವಣಾ ಪ್ರಚಾರದ ವೇಳೆ ಸಭೆಯಲ್ಲಿಯೇ ಹಾರ್ದಿಕ್ ಪಟೇಲ್‌ಗೆ ಅಪರಿಚಿತ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ್ದಾರೆ.
