ಮಡಿಕೇರಿ:
ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಅವರ ತಂದೆ ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
68 ವರ್ಷದ ಉದ್ದಪಂಡ ಪೂಣಚ್ಛ ವಯೋಸಹಜ ರೋಗಗಳಿಂದ ಬಳಲುತ್ತಿದ್ದರು. ಈ ಹಿಂದೆ ಅವರಿಗೆ ಸರ್ಜರಿಯಾಗಿತ್ತು. ಸಣ್ಣ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಒಂದೂವರೆ ತಿಂಗಳಿನಿಂದ ಯಾವುದೇ ಆಹಾರ ಸೇವಿಸಲು ಆಗುತ್ತಿರಲಿಲ್ಲ. ಆದ್ದರಿಂದ ಕೇವಲ ಡ್ರಿಪ್ಸ್ ನೀಡಲಾಗುತ್ತಿತ್ತಂತೆ. ಹೀಗಾಗಿ ಗಣನೀಯ ಪ್ರಮಾಣದಲ್ಲಿ ಅವರ ತೂಕ ಇಳಿದಿತ್ತು. ಸ್ವಲ್ಪಮಟ್ಟಿಗೆ ಸುಧಾರಿಸಿಕೊಳ್ಳುವ ಸಂದರ್ಭದಲ್ಲಿಯೇ ಅವರು ಕೊನೆಯುಸಿರೆಳೆದಿದ್ದಾರೆ.
ಇಂದು ವಿರಾಜಪೇಟೆ ಬಳಿಯ ಕುಮ್ಮೆತೋಡು ಪ್ರದೇಶದಲ್ಲಿ ಹರ್ಷಿಕಾ ತಂದೆಯ ಅಂತ್ಯಕ್ರಿಯೆ ನಡೆಯಲಿದೆ ಎಂದು ಹರ್ಷಿಕಾ ಕುಟುಂಬಸ್ಥರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ