ವರ್ಷದ ಬಳಿಕ ಹಾಸನಾಂಬ ದೇಗುಲ ಓಪನ್ ; ಭಕ್ತರಿಗೆ ಆನ್‌ಲೈನ್‌ ದರ್ಶನ!!

ಹಾಸನ : 

      ಇತಿಹಾಸ ಪ್ರಸಿದ್ಧ ಹಾಸನಾಂಬ ದೇಗುಲದ ಬಾಗಿಲು ನ.5ರಿಂದ 16ರವರೆಗೆ ಒಟ್ಟು 12 ದಿನಗಳ ಕಾಲ ತೆರೆಯಲಿದ್ದು, ಪೂಜಾ ಕೈಂಕರ್ಯ ನೆರವೇರಲಿದೆ. 

     ವರ್ಷಕ್ಕೊಮ್ಮೆ ದರ್ಶನ ನೀಡುವ ತಾಯಿಯ ದೇವಾಲಯವನ್ನು ವಿವಿಧ ಹೂವುಗಳಿಂದ ಮದುವಣಗಿತ್ತಿಯಂತೆ ಸಿಂಗರಿಸಲಾಗಿದೆ. 

     ಕೋವಿಡ್ ಹಿನ್ನೆಲೆ ಜಿಲ್ಲಾಡಳಿತ ದೇವಿ ದರ್ಶನಕ್ಕೆ ಭಕ್ತರಿಗೆ ನಿರ್ಬಂಧಿಸಿ ವಿಶೇಷ ಆಹ್ವಾನಿತ ವಿಐಪಿಗಳಿಗೆ ಮೊದಲ ದಿನ ಹಾಗೂ ಕೊನೆಯ ದಿನ ಅವಕಾಶ ಕಲ್ಪಿಸಿದೆ. ಸಾರ್ವಜನಿಕರಿಗೆಂದು ನಗರದ 10 ಕಡೆಗಳಲ್ಲಿ ಎಲ್‌ಇಡಿ ಪರದೆ ಮೂಲಕ ದೇವಿಯ ನೇರ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಯೂಟ್ಯೂಬ್​ನಲ್ಲಿಯೂ ದೇವಿಯ ದರ್ಶನದ ಭಾಗ್ಯವನ್ನು ಪಡೆಯಬಹುದಾಗಿದೆ.

     ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬ ದೇಗುಲಕ್ಕೆ ರಾಜ್ಯ ಮಾತ್ರವಲ್ಲದೇ, ವಿವಿಧ ಕಡೆಗಳಿಂದ ಅಸಂಖ್ಯಾತ ಭಕ್ತರು ಆಗಮಿಸಿ, ದೇವಿಯ ದರ್ಶನ ಪಡೆಯುತ್ತಿದ್ದರು. ಆದರೆ ಈ ಬಾರಿ ಕೊರೋನಾ ಹಿನ್ನೆಲೆ, ದೇವಿಯ ದರ್ಶನಕ್ಕೆ ಭಕ್ತರಿಗೆ ಅವಕಾಶ ಇಲ್ಲ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link