‘ನಮ್ಮ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ’ -ಎಚ್.ಡಿ.ಡಿ

ಬೆಂಗಳೂರು : 

      ಇತ್ತೀಚೆಗೆ ಪ್ರಾದೇಶಿಕ ಪಕ್ಷ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ಮಾತು ಕೇಳಿಬರುತ್ತಿವೆ. ನಮ್ಮ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದರು.

      ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡರು, ನಾನು ವೈಯಕ್ತಿಕವಾಗಿ ಯಾರ ಬಗ್ಗೆಯೂ ಮಾತನಾಡಲ್ಲ. ಕಾಂಗ್ರೆಸ್ ಬಗ್ಗೆ ಮಾತನಾಡುತ್ತಾ ಹೋದರೆ ನಾನು ತುಂಬಾ ಮಾತನಾಡುತ್ತೇನೆ. ಜೆಡಿಎಸ್ ಮನೆ ಅಲುಗಾಡುತ್ತಿದೆ ಎಂದು ಹೇಳುತ್ತಿದ್ದಾರೆ.  ಕಾಂಗ್ರೆಸ್ ಸೀಟುಗಳು 130 ಇದ್ದದ್ದು 78ಕ್ಕೆ ಯಾಕೆ ಇಳಿಯಿತು? ಜೆಡಿಎಸ್ ಜೊತೆ ಕೈ ಜೋಡಿಸಿದ್ದಕ್ಕೆ ಸೀಟು ಕಳೆದುಕೊಂಡೆವು ಎನ್ನುತ್ತಾರೆ. ನಾವು 28 ಸೀಟುಗಳನ್ನು ಕಳೆದುಕೊಂಡ್ವಿ. ಕಾಂಗ್ರೆಸ್ ನವರು 50 ಸೀಟ್ ಕಳೆದುಕೊಂಡ್ರು. ಒಂದು ನಗರಸಭೆ ಸೀಟ್ ಕೂಡ ಅವರಿಗೆ ಗೆಲ್ಲಲು ಆಗಿಲ್ಲ ನಮ್ಮ ಬಗ್ಗೆ ಆರೋಪ ಮಾಡುವುದು ಎಷ್ಟು ಸರಿ ಎಂದು ವಾಗ್ದಾಳಿ ನಡೆಸಿದರು.

      ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನ ಚರ್ಚೆಯೇ ಬಾಲಿಷ. ಜ. 7ರಂದು ಅರಮನೆ ಮೈದಾನದಲ್ಲಿ ನಡೆಯುವ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ಗಟ್ಟಿ ದನಿಯಲ್ಲಿ ಹೇಳಲಿದ್ದಾರೆ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap