87 ಸಂಭ್ರಮದಲ್ಲಿ ರಾಜಕೀಯ ದಿಗ್ಗಜ ದೇವೇಗೌಡ!

ಬೆಂಗಳೂರು:

      ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗಿಂದು 87 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ.

      ಹುಟ್ಟುಹಬ್ಬದ ನಿಮಿತ್ತ ದೇವೇಗೌಡರು ಕುಟುಂಬ ಸಮೇತ ತಿರುಪತಿಗೆ ತೆರಳಿದ್ದಾರೆ ಎನ್ನಲಾಗಿದೆ. ನಿನ್ನೆ( ಶುಕ್ರವಾರ ) ಸಂಜೆ ವಿಶೇಷ ವಿಮಾನದಲ್ಲಿ ತಿರುಪತಿಗೆ ತೆರಳಿದ್ದು, ದೇವೇಗೌಡರ ಜೊತೆಗೆ ಅವರ ಪತ್ನಿ ಚೆನ್ನಮ್ಮ, ಸಿಎಂ ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ ಸೇರಿದಂತೆ 23 ಜನ ಕುಟುಂಬ ಸದಸ್ಯರು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಬೆಳಗ್ಗೆ 5 ಗಂಟೆಗೆ ದೇವೇಗೌಡರು ತಿರುಪತಿ ತಿಮ್ಮಪ್ಪನಿಗೆ ಸುಪ್ರಭಾತ ಸೇವೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

      ಇಂದು ಮಧ್ಯಾಹ್ನ ತಿರುಪತಿಯಿಂದ ಹಿಂದಿರುಗಿ ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಕುಟುಂಬ ಸಮೇತರಾಗಿ ಬೆಂಗಳೂರಿಗೆ ಬರಲಿದ್ದಾರೆ ಎಂದು ತಿಳಿದುಬಂದಿದೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ