ಹಾಸನ:
ಹಾಸನ ಲೋಕಸಭಾ ಕ್ಷೇತ್ರಕ್ಕೆ ಪ್ರಜ್ವಲ್ ರೇವಣ್ಣ ಜೆಡಿಎಸ್ ನ ಅಧಿಕೃತ ಅಭ್ಯರ್ಥಿ ಎಂದು ನಿರ್ಧರಿಸಿದ್ದೇನೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಬುಧವಾರ ಅಧಿಕೃತವಾಗಿ ಸ್ಪಷ್ಟಪಡಿಸಿದ್ದಾರೆ
ಬುಧವಾರ ಹೊಳೆನರಸೀಪುರದ ಮೂಡಲಹಿಪ್ಪೆ ಗ್ರಾಮದಲ್ಲಿ ನಡೆದ ಚುನಾವಣೆ ಪ್ರಚಾರದ ವೇದಿಕೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಅಧಿಕೃತವಾಗಿ ಘೋಷಣೆ ಮಾಡಿದರು.
ಕೊಟ್ಟ ಮಾತಿನಂತೆ ನನ್ನ ಮೊಮ್ಮಗನಿಗಾಗಿ ಕ್ಷೇತ್ರ ಬಿಟ್ಟು ಕೊಟ್ಟಿದ್ದೇನೆ. ಇನ್ನು ನಿಮ್ಮ ಮಡಿಲಿಗೆ ಪ್ರಜ್ವಲ್ನನ್ನು ಹಾಕಿದ್ದೇನೆ. ನಿಮ್ಮ ಅನುಮತಿ ಪಡೆದೆ ನಾನು ಪ್ರಜ್ವಲ್ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದೇನೆ. ನಿಮ್ಮ ಆಶೀರ್ವಾದ ಪ್ರಜ್ವಲ್ಮೇಲೆ ಇರಲಿ ಎಂದು ದೇವೇಗೌಡರು ಕಣ್ಣೀರಿಟ್ಟರು. ದೇವೇಗೌಡರು ಕಣ್ಣೀರು ಸುರಿಸಿದ್ದು ನೋಡಿ, ಅವರ ಪುತ್ರ ರೇವಣ್ಣ ಅವರು ಕಣ್ಣು ಒರೆಸಿಕೊಂಡರು, ವೇದಿಕೆಯಲ್ಲಿದ್ದ ಮೊಮ್ಮಗ ಪ್ರಜ್ವಲ್ ಅವರ ಕಣ್ಣಾಲಿಗಳು ತುಂಬಿ ಬಂದವು.
ಇಂದು ಹಾಸನ ಹೊಳೆನರಸೀಪುರದ ಮೂಡಲಹಿಪ್ಪೆ ಗ್ರಾಮದಲ್ಲಿರುವ ಚನ್ನಕೇಶವ ದೇವಾಲಯಕ್ಕೆ ಮೊಮ್ಮಗ ಪ್ರಜ್ವಲ್ ರೇವಣ್ಣ, ಪುತ್ರ ರೇವಣ್ಣ, ಸೊಸೆ ಭವಾನಿ ರೇವಣ್ಣ, ಪಕ್ಷದ ಶಾಸಕರ ಜೊತೆ ಆಗಮಿಸಿ ನಾಮಪತ್ರವನ್ನು ಇಟ್ಟು ಪೂಜೆ ಸಲ್ಲಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ