ಮೈಸೂರು :
ರಾಜ್ಯದ ಉಪಚುನಾವಣೆಗೆ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ, ದೇವೇಗೌಡರದ್ದು ಕುಟುಂಬ ರಾಜಕಾರಣ ಎಂಬ ಮಾತು ಕೇಳಿ ಸಾಕಾಗಿದೆ. ಇಲ್ಲಿಯವರೆಗೆ ಈ ವಿಚಾರದಲ್ಲಿ ದೇವೇಗೌಡರ ಕುಟುಂಬ ಅನುಭವಿಸಿರುವ ನೋವು ಸಾಕು. ಗೌಡರ ಕುಟುಂಬ ಸದಸ್ಯರು ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿಗಳು ಕೆಲವು ಮಾಧ್ಯಮಗಳಲ್ಲಿ ಬರುತ್ತಿವೆ. ಉಪ ಕದನವಾಗಲಿ, ದೊಡ್ಡ ಕದನವಾಗಲಿ ನಮ್ಮ ಕುಟುಂಬದಿಂದ ಸ್ಪರ್ಧೆ ಮಾಡುವುದಿಲ್ಲ. ಒತ್ತಡ ಇದ್ದರೂ ಸ್ಥಳಿಯರಿಗೇ ಟಿಕೆಟ್ ಕೊಡುತ್ತೇವೆ. ಸಾಮಾನ್ಯ ಕಾರ್ಯಕರ್ತರನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಹೇಳಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ನಾವು ಶಕ್ತಿ ಮೀರಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ನೆರವು ನೀಡಿ ಹೃದಯ ವೈಶಾಲ್ಯ ಮೆರೆದೆವು. ಆದ್ರೆ ಕಾಂಗ್ರೆಸ್‌ನಿಂದ ಸಹಾಯ ಸಿಗಲಿಲ್ಲ. ಹೀಗಾಗಿ ಯಾರ ಸಹವಾಸವೂ ಬೇಡ ಎಂದು ಸ್ವತಂತ್ರವಾಗಿಯೇ ನಾವು ಉಪ ಚುನಾವಣೆ ಎದುರಿಸುತ್ತಿದ್ದೇವೆ ಎಂದು ಅವರು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ