ಬೆಂಗಳೂರು :
ಕಳೆದ ಕೆಲ ದಿನಗಳಿಂದ ಬಿಡುವಿಲ್ಲದೇ ಉಪಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ಕಾರಣ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಬಳಲಿದ್ದಾರೆ. ಹೀಗಾಗಿ ವೈದ್ಯರು 10 ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ.
ಉಪಚುನಾವಣೆ ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಬಳಲಿದ್ದು, ಇನ್ನು 10 ದಿನಗಳ ವಿಶ್ರಾಂತಿ ವೇಳೆ, ಯಾವುದೇ ಪ್ರವಾಸ, ರಾಜಕೀಯ ನಾಯಕರು, ಸಾರ್ವಜನಿಕರ ಭೇಟಿಯಿಲ್ಲದೇ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸೂಚಿಸಿದ್ದಾರೆ.
ಆರೋಗ್ಯ ಸುಧಾರಣೆಗಾಗಿ ಯಾರೂ ಕೂಡ ಎಚ್ಡಿಕೆ ಭೇಟಿಗೆ ಮುಂದಾಗಬಾರದು ಎಂದು ಕುಟುಂಬ ಸದಸ್ಯರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ತೀವ್ರ ವಾಗಿ ಬಳಲಿದ್ದರಿಂದ ಕುಮಾರಸ್ವಾಮಿ ಅವರನ್ನು ನಿನ್ನೆ ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ತಪಾಸಣೆ ನಡೆಸಲಾಗಿತ್ತು. ಈ ವೇಳೆ, ರಕ್ತದಲ್ಲಿ ಸೋಂಕು ಉಂಟಾಗಿರುವುದು ವೈದ್ಯಕೀಯ ಪರೀಕ್ಷಾ ವರದಿಯಿಂದ ತಿಳಿದಿದೆ. ಹೀಗಾಗಿ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ