ಮಾಜಿ ಸಚಿವ ಎಚ್​​.ಡಿ ರೇವಣ್ಣಗೂ ಕೊರೋನಾ ಪಾಸಿಟಿವ್!!

ಬೆಂಗಳೂರು: 

      ಮಾಜಿ ಸಚಿವ ಎಚ್. ಡಿ. ರೇವಣ್ಣ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ.

      ಹೀಗಾಗಿ ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರತ್ಯೇಕ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

     ಸದ್ಯ ಎಚ್​​.ಡಿ ರೇವಣ್ಣ ಬೆಂಬಲಿಗರು, ಕಾರ್​​ ಚಾಲಕ ಸೇರಿದಂತೆ ಮನೆಯ ಸದಸ್ಯರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಹಾಗೆಯೇ ಅವರೊಂದಿಗೆ ಇತ್ತೀಚೆಗೆ ಸಂಪರ್ಕ ಹೊಂದಿದ್ದ ಎಲ್ಲರನ್ನು ಕೋವಿಡ್​​-19 ಟೆಸ್ಟ್​ಗೆ ಒಳಗಾಗುವಂತೆ ರೇವಣ್ಣ ಮನವಿ ಮಾಡಿದ್ದಾರೆ.

      ಇನ್ನು, ಎಚ್​.ಡಿ ರೇವಣ್ಣಗೆ ಹಲವರು ಹಿರಿಯ ರಾಜಕಾರಣಿಗಳು ಸೇರಿದಂತೆ ಬೆಂಬಲಿಗರು ಫೋನ್​​ ಮಾಡಿ ಬೇಗ ಗುಣಮುಖರಾಗಿ ಎಂದು ಹಾರೈಸಿದ್ದಾರೆ. ಎಲ್ಲರೂ ಶೀಘ್ರದಲ್ಲೇ ರೇವಣ್ಣ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

      ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಪುಟದ ಅನೇಕ ಸಚಿವರು ಸೇರಿದಂತೆ ರಾಜ್ಯದ ಬಹುತೇಕ ಜನಪ್ರತಿನಿಧಿಗಳು ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​​ ಮತ್ತು ಜೆಡಿಎಸ್​​ನ ಅರಸೀಕೆರೆ ಕ್ಷೇತ್ರದ ಶಾಸಕ ಕೆ. ಎಂ ಶಿವಲಿಂಗೇಗೌಡರಿಗೂ ಕೋವಿಡ್​​-19 ಪಾಸಿಟಿವ್​​ ಕಾಣಿಸಿಕೊಂಡಿತ್ತು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link