ಬೆಂಗಳೂರು:
ಗುಪ್ತಚರ ವರದಿ ಸಂಗ್ರಹಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮುಂದಾಗಿದ್ದಾರೆ.
ಗುಪ್ತಚರ ಇಲಾಖೆ ಬಳಸಿಕೊಂಡು, ಬಳ್ಳಾರಿ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳ ಶಾಸಕರ ಮೇಲೆ ಹದ್ದಿನಕಣ್ಣು ಇಡುವ ಸಲುವಾಗಿ ನಿರ್ಧರಿಸಿರುವ ಮುಖ್ಯಮಂತ್ರಿಗಳು, ಆಪರೇಷನ್ ಕಮಲದ ನಡೆಸುತ್ತಿರುವ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ಅವರ ತಂತ್ರಕ್ಕೆ ಪ್ರತಿತಂತ್ರ ಹೂಡುವ ಸಲುವಾಗಿ, ಈ ನಿರ್ಧಾರ ಕೈಗೊಂಡಿದ್ದಾರೆ.
2013 ರಲ್ಲಿ ಮೆಗಾಸಿಟಿ ಹಗರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ಅವರು, ಆಪರೇಷನ್ ಕಮಲಕ್ಕೆ ಮುಂದಾಗಿದ್ದು, ಅದಕ್ಕೆ ಪ್ರತಿತಂತ್ರವಾಗಿ ತಿರುಗೇಟು ನೀಡಲು, ಹಗರಣದ ಪ್ರಕರಣವನ್ನು ಮತ್ತೆ ಪ್ರಾರಂಭಿಸಲು ಚಿಂತನೆ ನಡೆಲಾಗಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಏನೆಲ್ಲಾ ಕ್ರಮ ಕೈಗೊಳ್ಳಬಹುದು ಎಂದು ಚರ್ಚಿಸಲಾಗುವುದು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
