ಇಂದು-ನಾಳೆ ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ!!!

ಹಾಸನ:

      ಮಂಗಳೂರು-ಬೆಂಗಳೂರು ನಡುವಿನ ರೈಲು ಓಡಾಟವನ್ನು ಇಂದು ಮತ್ತು ನಾಳೆ ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

      ಮಲೆನಾಡು ಭಾಗದಲ್ಲಿ ಭಾರೀ ಮಳೆಯಿಂದಾಗಿ ಗುಡ್ಡ ಕುಸಿಯುವ ಭೀತಿ ಉಂಟಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಶಿರಾಡಿ ಘಾಟ್ ರೈಲು ಮಾರ್ಗದ ಸಿರಿಬಾಗಿಲು ಸಮೀಪದ ಮಣಿಭಂಡ ಬಳಿ ರೈಲು ಹಳಿಗಳ ಬಳಿ ಇರುವ ಅಪಾಯಕಾರಿ ಬಂಡೆಯನ್ನು ತೆರವುಗೊಳಿಸುವ ಸಲುವಾಗಿ ಶನಿವಾರ ಹಾಗೂ ಭಾನುವಾರ (ಜು.21 ಮತ್ತು 22 ) ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.

      ಘಾಟಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ಅಪಾಯಕಾರಿ ಬಂಡೆ ಯಾವುದೇ ಕ್ಷಣದಲ್ಲಾದರೂ ರೈಲು ಹಳಿಯ ಮೇಲೆ ಉರುಳಿ ಬೀಳುವ ಸಾಧ್ಯತೆಯಿದೆ. ಹೀಗಾಗಿ ಯಾವುದೇ ಅಪಾಯ ಸಂಭವಿಸುವ ಮುನ್ನವೇ ರೈಲ್ವೆ ಇಲಾಖೆ ಎಚ್ಚೆತ್ತಿದ್ದು, ಬಂಡೆ ತೆರವಿಗೆ ಸಿದ್ಧತೆ ನಡೆಸಿದೆ.

      ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಳೆ ಹೀಗೇ ಮುಂದುವರಿದರೆ ಕಲ್ಲು ಬಂಡೆ ಮತ್ತು ಗುಡ್ಡ ರೈಲು ಹಳಿಯ ಮೇಲೆ ಜಾರುವ ಸಂಭವವಿದೆ ಎಂದು ರೈಲ್ವೇ ಅಧಿಕಾರಿಗಳ ಮೂಲಗಳು ತಿಳಿಸಿದೆ.

      ಇನ್ನು ರೈಲ್ವೇ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಈಗಲೂ ಸಣ್ಣಪುಟ್ಟ ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap