ಬೆಂಗಳೂರು:
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣದ ಒಳನಾಡಿನಲ್ಲಿ ಇಂದಿನಿಂದ ಮೂರು ದಿವಸಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆಯ ನಿರ್ದೇಶಕ ಜಿ.ಎಸ್ ಶ್ರೀನಿವಾಸ್ ಅವರು ತಿಳಿಸಿದ್ದಾರೆ.
ಇನ್ನು ನಾಡಿನ ಹಲವು ಭಾಗಗಳಲ್ಲಿ ಬರಗಾಲ ತಾಂಡವಾಡುತ್ತಿದ್ದು, ಕುಡಿಯಲು ನೀರಿಗಾಗಿ ಪರಡಾಡುವ ಸನ್ನಿವೇಶ ಹೆಚ್ಚಾಗಿದ್ದು, ಮಳೆಗಾಗಿ ಜನತೆ ಆಕಾಶದತ್ತ ಮುಖ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/08/Rain_cloud_front_over_Thanet_Wind_Farm_Broadstairs_Kent_England_1.jpg)