ಬೆಂಗಳೂರು :
ಚುನಾವಣೆ ತಕರಾರು ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ ಹೈಕೋರ್ಟ್ ನಿಂದ 5 ಲಕ್ಷ ದಂಡ ವಿಧಿಸಿ ಆದೇಶಿಸಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು, ಶಾಸಕರಾಗಿ ಆಯ್ಕೆಯಾದ ನಂತ್ರ, ಆಸ್ತಿ ವಿವರವನ್ನು ಬಹಿರಂಗ ಪಡಿಸಿರಲಿಲ್ಲ. ಹೀಗಾಗಿ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಹೈಕೋರ್ಟ್ ಗೆ ಸಿ.ಕೆ.ಸಿದ್ರಾಮ ಎಂಬುವರು ಅರ್ಜಿ ಸಲ್ಲಿಸಿದ್ದರು. ಇಂತಹ ಅರ್ಜಿಯ ವಿಚಾರಣೆಗೆ ಹಾಜರಾಗುವಂತೆ ಈಶ್ವರ್ ಖಂಡ್ರೆಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿತ್ತು.
ಇಂದು ಪ್ರಕರಣ ಕುರಿತಂತೆ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ ಹೈಕೋರ್ಟ್ ನಿಂದ 5 ಲಕ್ಷ ದಂಡ ವಿಧಿಸಿ, ಅದನ್ನು ಸಿಎಂ ಕೋವಿಡ್ ಪರಿಹಾರ ನಿಧಿಗೆ ಪಾವತಿಸಲು ಸೂಚಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ