ತುಮಕೂರು :
ಜಿಲ್ಲೆಯ ಸಿದ್ದಗಂಗಾ ಮಠದ ಮಠಾಧಿಪತಿಗಳು ಇವರು ತ್ರಿವಿಧ ( ಅನ್ನ , ಅಕ್ಷರ , ಜ್ಞಾನ ) ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿಗಳು ವಿಧಿವಶರಾಗಿದ್ದು, ಹೀಗಾಗಿ ಕರ್ನಾಟಕಾದ್ಯಂತ ಸರ್ಕಾರಿ ಶಾಲಾ ಕಾಲೇಜುಗಳಿಗೆ ಮಂಗಳವಾರ(ಜನವರಿ22)ರಂದು ಶಾಲಾ ಕಾಳೇಜುಗಳಿಗೆ ರಜೆ ಘೋಷಿಸಲಾಗಿದೆ.
ಈ ಕುರಿತು ಸುದ್ಧಿಗೋಷ್ಠಿ ನಡೆಸಿರುವ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸಿದ್ದಗಂಗಾ ಶ್ರೀಗಳು ಲಿಂಗೈಕ್ಯರಾದರು ಎಂದು ಹೇಳಲು ನೋವಿನಿಂದ ವಿಷಾಧಿಸುತ್ತೇನೆ. ಶ್ರೀಗಳಿಗೆ ಅತ್ಯುತ್ತಮ ಗೌರವ ಸಲ್ಲಿಸಬೇಕಾದದ್ದು ನಮ್ಮ ಕರ್ತವ್ಯ ಇದೆ. ಯಡಿಯೂರಪ್ಪ, ಸೋಮಣ್ಣ ಎಲ್ಲರೊಂದಿಗೂ ಚರ್ಚಿಸಿದ ಬಳಿಕ ನಾಳೆ ಮಧ್ಯಾಹ್ನ 3 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಸರ್ಕಾರ ಮತ್ತು ಮಠದ ವತಿಯಿಂದ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ನಾಳೆ ಮಧ್ಯಾಹ್ನ 4.30 ಕ್ಕೆ ಸ್ವಾಮೀಜಿಗಳ ಅಂತಿಮ ವಿಧಿವಿಧಾನ ನಡೆಯಲಿದೆ. ಶ್ರೀಗಳ ನಿಧನದಿಂದ ಧಾರ್ಮಿಕ ಕ್ಷೇತ್ರಕ್ಕೆ ಭರಿಸಲಾರದ ನಷ್ಟ ಉಂಟಾಗಿದ್ದು, ಶ್ರೀಗಳ ಗೌರವಾರ್ಥ ಮಂಗಳವಾರ ರಾಜ್ಯಾದ್ಯಂತ ಸರಕಾರಿ ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಮಾಹಿತಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ