ಚಿಕ್ಕಮಗಳೂರು :
ಕೊರೊನಾ ವೈರಸ್ ಭೀತಿಯಿಂದಾಗಿ ಕಳೆದ ಮೂರು ತಿಂಗಳಿಂದ ಬಂದ್ ಆಗಿದ್ದ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ ಜುಲೈ 1 ರಿಂದ ತೆರೆಯಲಿದ್ದು, ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಜೂನ್ 8 ರಿಂದ ದೇವಾಲಯಗಳನ್ನು ತೆರೆಯಲು ರಾಜ್ಯ ಸರ್ಕಾರ ಅವಕಾಶ ನೀಡಿದ್ದರೂ, ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ ಭಕ್ತರ ದರ್ಶನಕ್ಕೆ ಬ್ರೇಕ್ ಹಾಕಿತ್ತು. ಭಕ್ತರ ಹಿತದೃಷ್ಟಿ ಹಾಗೂ ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇವಸ್ಥಾನ ಆಡಳಿತ ಮಂಡಳಿ ಈ ಕ್ರಮ ಕೈಗೊಂಡಿತ್ತು.
ಇದೀಗ ಜುಲೈ 1 ರಿಂದ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಿರುವುದಾಗಿ ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ದೇವಾಲಯ ಆಡಳಿತ ಮಂಡಳಿ ಭಕ್ತರ ಆರೋಗ್ಯದ ದೃಷ್ಟಿಯಿಂದ ಕೆಲವೊಂದು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಭಕ್ತರು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಿಕೊಂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ