ಹೊಸಕೋಟೆ :

ಹೊಸಕೋಟೆ ನಗರಸಭೆಯ 31 ವಾರ್ಡ್ಗಳಿಗೆ ನಡೆದ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.![]()
ನಗರಸಭೆಯ 31 ವಾರ್ಡ್ಗಳ ಪೈಕಿ 27 ವಾರ್ಡ್ಗಳ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 22 ವಾರ್ಡ್ಗಳಲ್ಲಿ ಗೆದ್ದಿದೆ, ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿದೆ.
ಇತ್ತೀಚೆಗಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರ 7 ಮಂದಿ ಬೆಂಬಲಿಗರೂ ನಗರಸಭೆಯಲ್ಲಿ ಗೆಲುವು ಸಾಧಿಸಿದ್ದಾರೆ. ಇನ್ನುಳಿದಂತೆ ಎಸ್ಡಿಪಿಐ ಒಂದು, ಪಕ್ಷೇತರ ಅಭ್ಯರ್ಥಿಯೊಬ್ಬರು ಜಯ ಸಾಧಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








