ಬೆಂಗಳೂರು :
ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಅಮ್ಮನ ಹೊಟ್ಟೆಯಲ್ಲಿಯೇ ಮಗು ಸಾವನ್ನಪ್ಪಿರುವ ಘಟನೆ ಇಂದು ನಗರದ ಶ್ರೀರಾಂಪುರದಲ್ಲಿ ನಡೆದಿದೆ.
ಶ್ರೀರಾಂಪುರ ಮೂಲದ ಗರ್ಭಿಣಿಯೊಬ್ಬರಿಗೆ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಅವರನ್ನು ಆಟೋದಲ್ಲಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಆಸ್ಪತ್ರೆ ಸಿಬ್ಬಂದಿ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದು, ವಾಣಿವಿಲಾಸ ಆಸ್ಪತ್ರೆಗೆ ಕರೆದೊಯ್ದು ಕೋವಿಡ್ ಟೆಸ್ಟ್ ಮಾಡಿಸಿಕೊಂಡು ಬರುವಂತೆ ಸೂಚಿಸಿದ್ದಾರೆ. ಆದರೆ, ಅಲ್ಲಿಯೂ ಬೆಡ್ ಸಿಗದೇ ದಾಖಲಿಸಿಕೊಂಡಿಲ್ಲ. ಹೀಗಾಗಿ ಗರ್ಭಿಣಿ ಸುಮಾರು 8 ಗಂಟೆಗಳ ಕಾಲ ಆಟೋದಲ್ಲೇ ನರಳಾಡಿದ್ದಾರೆ. ಬಳಿಕ ಕೆಸಿ ಜನರಲ್ ಆಸ್ಪತ್ರೆಗೆ ಬರುತ್ತಿದ್ದಂತೆ ತೀವ್ರ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಆಟೋದಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ, ನವಜಾತ ಶಿಶು ಹೊಟ್ಟೆಯಲ್ಲೇ ಸಾವನ್ನಪ್ಪಿದೆ.
ಆಸ್ಪತ್ರೆಗಳ ನಿರ್ಲಕ್ಷ್ಯತನದಿಂದಲೇ ಮಗು ಬದುಕಲಿಲ್ಲ ಎಂದು ಕುಟುಂಬಸ್ಥರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ