ಚಿಕ್ಕಬಳ್ಳಾಪುರ :
ಮಳೆಯಿಂದ ಮನೆ ಕುಸಿದು ಬಿದ್ದು ಒಂದೇ ಕುಟುಂಬದ ಇಬ್ಬರು ಮೃತಪಟ್ಟು ಮತ್ತಿಬ್ಬರು ತೀವ್ರ ಗಾಯಗೊಂಡಿರುವ ಹೃದಯ ವಿದ್ರಾವಿಕ ಘಟನೆ ನಡೆದಿದೆ.
ತಾಲೂಕಿನ ಕೈವಾರ ಹೋಬಳಿಯ ಸಂತೇಕಲ್ಲಹಳ್ಳಿ ಗ್ರಾಪಂನ ವೈಜಕೂರು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಇಂದು ಬೆಳಿಗ್ಗೆ 6.30 ಕ್ಕೆ ಮನೆ ದಿಢೀರ್ ಕುಸಿದಿದೆ.
ಮನೆಯ ಅವಶೇಷಗಳಡಿ ಸಿಲುಕಿದ್ದ ಕುಟುಂಬಸ್ಥರನ್ನು ಸ್ಥಳೀಯರು ಹೊರತೆಗೆಯುವ ವೇಳೆಗೆ ತಂದೆ ಮಗ ಅದಾಗಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿರುವ ತಾಯಿ ಮತ್ತು ಮಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಳಕ್ಕೆ ಅಗ್ನಿಶಾಮಕದಳ ಅಧಿಕಾರಿಗಳು ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದಾರೆ. ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
