ಮನೆ ಛಾವಣಿ ಕುಸಿತ : ಮೂವರ ದುರ್ಮರಣ!!!

ಧಾರವಾಡ:

      ಮನೆ ಛಾವಣಿ ಕುಸಿದು ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಯರಗುಪ್ಪಿಯಲ್ಲಿ ನಡೆದಿದೆ. 

      ಯಲ್ಲವ್ವ(53), ಜ್ಯೋತಿ(9), ಶ್ರಾವಣಿ(4) ಮೃತಪಟ್ಟವರೆಂದು ಗುರುತಿಸಲಾಗಿದೆ. ಹಳೆ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿದು ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

       ಕುಂದಗೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap