ಹುಬ್ಬಳ್ಳಿ :
2 ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಕುಂದಗೋಳ ತಾಲೂಕಿನ ಶೇರೆವಾಡ ಟೋಲ್ ಬಳಿ ನಡೆದಿದೆ.
ಬೈಕ್ ಸವಾರರು ನೂಲ್ವಿಯಿಂದ ಕುಂದಗೋಳಕ್ಕೆ ಹೊರಟಿದ್ದರು. ಈ ವೇಳೆ ಕುಂದಗೋಳದಿಂದ ವಾಪಸ್ಸಾಗುತ್ತಿದ್ದ ಮತ್ತೊಂದು ಬೈಕ್ಗೆ ಪರಸ್ಪರ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.
ಅತಿ ವೇಗವಾಗಿ ಬೈಕ್ ಚಲಾವಣೆ ಮಾಡಿದ್ದೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಮೃತ ಬೈಕ್ ಸವಾರರ ಗುರುತು ಪತ್ತೆಯಾಗಿಲ್ಲ. ಡಿಕ್ಕಿಯ ರಭಸಕ್ಕೆ ಬೈಕ್ಗಳು ಸಂಪೂರ್ಣವಾಗಿ ಜಖಂಗೊಂಡಿವೆ.
ಘಟನೆ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕುಂದಗೋಳ ಹಾಗೂ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಓರ್ವನನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಮೃತರ ವಿವರವನ್ನ ಪೊಲೀಸರು ಕಲೆ ಹಾಕುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
