ಹುಬ್ಬಳ್ಳಿ:
ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ವಿದ್ಯಾರ್ಥಿಗಳ ಜಾಮೀನು ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ಇನ್ಸ್‌ಪೆಕ್ಟರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಹುಬ್ಬಳ್ಳಿಯ ಕೆ.ಎಲ್.ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಬಾಸೀತ ಸೋಪಿ, ತಾಲೀಬ್ ವಾನಿ ಅಮೀರ್, ಮೊಯಿನುದ್ದೀನ್ ವಾನಿ ಪಾಕಿಸ್ತಾನ ಪರವಾಗಿ ಘೋಷಣೆಗಳನ್ನು ಕೂಗಿದ್ದರು.ಕಾಶ್ಮೀರ ವಿದ್ಯಾರ್ಥಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ವಿಳಂಬ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಓರ್ವರನ್ನು ಅಮಾನತು ಮಾಡಲಾಗಿದೆ.
ಯಾವುದೇ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು 90 ದಿನದ ಅವಕಾಶ ಇರುತ್ತದೆ. ಆದರೆ, ಚಾರ್ಜ್ ಶೀಟ್ ಸಲ್ಲಿಕೆ ಮಾಡದ ಕಾರಣ ಆರೋಪಿಗಳಿಗೆ ಜಾಮೀನು ಸಿಕ್ಕಿತ್ತು. ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಪಾಕ್ ಪರ ಘೋಷಣೆ; ಹಿಂಡಲಗಾ ಜೈಲು ಅಂಧೇರಿ ಸೆಲ್‌ಗೆ ವಿದ್ಯಾರ್ಥಿಗಳು :
ಫೆಬ್ರವರಿ 14ರಂದು ಪುಲ್ವಮಾ ದಾಳಿ ನಡೆದು ವರ್ಷ ಪೂರೈಸಿದ ಸಂದರ್ಭದಲ್ಲಿ ಕೆಎಲ್‌ಇ ಕಾಲೇಜಿನಲ್ಲಿ ಹುತಾತ್ಮ ಯೋಧರನ್ನು ಸ್ಮರಿಸಲು ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಕಾಶ್ಮೀರ ಮೂಲದ ವಿದ್ಯಾರ್ಥಿಗಳಾದ ಅಮೀರ್, ಬಾಸಿತ್, ತಾಲೀಬ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಪಾಕ್ ಸೇನೆಯ ಹಾಡಿಗೆ ನೃತ್ಯ ಮಾಡಿದ್ದರು. ಪಾಕಿಸ್ತಾನ ಪರವಾದ ಘೋಷಣೆಗಳನ್ನು ಕೂಗಿದ್ದರು. ಬಳಿಕ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದರು.
ವಿಡಿಯೋ ಸಾಮಾಜಿಕ ತಾಲತಾಣದಲ್ಲಿ ವೈರಲ್ ಆದ ಬಳಿಕ ವಿದ್ಯಾರ್ಥಿಗಳನ್ನು ಸೆಕ್ಷನ್ 169ರ ಅಡಿ ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಲಾಗಿತ್ತು. ಆದರೆ, ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಬಳಿಕ ಗೋಕುಲ ಠಾಣೆ ಪೊಲೀಸರು ವಿದ್ಯಾರ್ಥಿಗಳನ್ನು ಪುನಃ ಬಂಧಿಸಿದ್ದರು. ಅವರು ಹುಬ್ಬಳ್ಳಿ ಜೈಲಿನಲ್ಲಿದ್ದರೆ ಹಲ್ಲೆ ನಡೆಯಬಹುದೆಂದು ಬೆಳಗಾವಿಯ ಹಿಂಡಲಗಾ ಜೈಲಿಗೆ ಕಳಿಸಲಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ