ಬೆಂಗಳೂರು:
ಸಿಲಿಕಾನ್ ಸಿಟಿಯಲ್ಲಿ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಆಟೋವೊಂದು ಸಂಪೂರ್ಣ ಜಖಂಗೊಂಡಿದೆ.
ಸೋಮವಾರ ಬೆಳಿಗ್ಗೆ 6:40ರ ಸುಮಾರಿಗೆ ನಗರದ ಟ್ಯಾಂಕ್‌ಬಂಡ್ ರಸ್ತೆಯಲ್ಲಿ ಮರವೊಂದು ಉರುಳಿ ಬಿದ್ದ ಪರಿಣಾಮ ಮರದಡಿ ಸಿಲುಕಿ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ.
ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಆದರೆ, ಆಟೋ ಚಾಲಕ ಸೇರಿ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಪೊಲೀಸರು ಹಾಗೂ ಬಿಬಿಎಂಪಿ ಸಿಬ್ಬಂದಿ ಘಟನಾ ಸ್ಥಳಕ್ಕೆ ಬಂದು ಮರ ತೆರವು ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
