ಹುಣಸೂರು:
ಹುಣಸೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಗೆ ಭಾರಿ ಮುಖಭಂಗ ಎದುರಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ.ಮಂಜುನಾಥ್ ವಿರುದ್ಧ ಸೋಲು ಅನುಭವಿಸಿದ್ದಾರೆ.
ರಾಜ್ಯ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದ್ದರೂ, ಹುಣಸೂರಿನಲ್ಲಿ ಕಾಂಗ್ರೆಸ್ ಎಚ್.ವಿಶ್ವನಾಥ್ ಸೋಲುಂಟಾಗಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಮಾಜಿ ಸಚಿವ ಮತ್ತು ಹಿರಿಯ ಮುಖಂಡ ಎಚ್. ವಿಶ್ವನಾಥ್, ಈ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ. ಕಾಂಗ್ರೆಸ್‌ನಿಂದ ಸಿಡಿದೆದ್ದು, ಜೆಡಿಎಸ್ ಸೇರಿದ್ದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ್ದರು. ಬಳಿಕ ಸಮ್ಮಿಶ್ರ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದರು.
ಆರಂಭದಿಂದಲೂ ವಿಶ್ವನಾಥ್ ಹಿನ್ನಡೆ ಅನುಭವಿಸಿದ್ದು, ಕಾಂಗ್ರೆಸ್ ನ ಎಚ್. ಪಿ. ಮಂಜುನಾಥ್ ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ.ಇನ್ನು ಕೆಲವೇ ಸುತ್ತುಗಳು ಮಾತ್ರ ಬಾಕಿಯಿದ್ದು, ಮಂಜುನಾಥ್ 23 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ. ಆದರೆ ಚುನಾವಣಾ ಆಯೋಗದಿಂದ ಪ್ರಕಟಣೆ ಹೊರ ಬಂದಿಲ್ಲ.
15 ಕ್ಷೇತ್ರಗಳಲ್ಲಿ ಮತ ಎಣಿಕೆ ಕಾರ್ಯ ಮುಗಿಯುತ್ತಾ ಬಂದಿದ್ದು, ಕೆಲವೇ ಗಂಟೆಗಳಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
