ಬೆಳಗಾವಿ:

ತವರು ಮನೆಯಿಂದ ಗಂಡನ ಮನೆಗೆ ಬರಲು ಒಪ್ಪದ ಪತ್ನಿಯ ತುಟಿ ಹಾಗೂ ಮೂಗನ್ನು ಕತ್ತರಿಸಿ ಪಾಪಿ ಪತಿ ವಿಕೃತಿ ಮೆರೆದ ಘಟನೆಯೊಂದು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ನಡೆದಿದೆ.
ಈ ಘಟನೆ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸುನಿತಾ ಸುರೇಶ್ ನಾಯಿಕ್(27) ಅವರು ಪತಿ ಸುರೇಶ್ ಪರಶುರಾಮ್ ನಾಯಿಕ್ ನಿಂದ ತೀವ್ರವಾಗಿ ಹಲ್ಲೆಗೊಳಗಾಗಿದ್ದಾರೆ.
ಕಾಗವಾಡದ ಸುನೀತಾ ನಾಯಿಕ (28) ಹಲ್ಲೆಗೊಳಗಾದವರು. ಮಹಾರಾಷ್ಟ್ರದ ಶಿರೋಳ ತಾಲೂಕಿನ ಶೇಡಶ್ಯಾಳ ಗ್ರಾಮದ ಸುರೇಶ ನಾಯಿಕ ಪತ್ನಿಯ ಮೇಲೆ ಹಲ್ಲೆ ನಡೆಸಿದ ಆರೋಪಿ.
ಘಟನೆಯ ವಿವರ :
ಸುನೀತಾ ಅವರ ವಿವಾಹ 2 ವರ್ಷಗಳ ಹಿಂದೆ ಮಹಾರಾಷ್ಟ್ರದ ಸುರೇಶ್ ಜತೆ ನೆರವೇರಿತ್ತು. ಮದುವೆ ಆದಾಗಿನಿಂದ ದಂಪತಿ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು. ಇದರಿಂದ ನೊಂದು ಕಾಗವಾಡದಲ್ಲಿರುವ ತವರುಮನೆಗೆ ವಾಪಸ್ ಬಂದಿದ್ದಳು. ಆಕೆಯನ್ನು ಕರೆದುಕೊಂಡು ಹೋಗಲು ಸುರೇಶ್ ಭಾನುವಾರ (ಜ.6) ಆಗಮಿಸಿದ್ದು, ಈ ವೇಳೆ ಇಬ್ಬರ ನಡುವೆ ಮತ್ತೆ ಜಗಳವಾಗಿದೆ. ಹಿರಿಯರ ಸಂಧಾನಕ್ಕೂ ಬಗ್ಗದ ಸುನೀತಾ, ಪತಿಯ ಮನೆಗೆ ಹೋಗಲು ನಿರಾಕರಿಸಿದ್ದಾಳೆ.
ಇದರಿಂದ ಬೇಸರಗೊಂಡ ಆಕೆಯ ಪತಿ ಸುರೇಶ, ಭಾನುವಾರ ರಾತ್ರಿ ಪತ್ನಿ ಮಲಗಿದ್ದಾಗ ಆಕೆಯ ಮೂಗು, ತುಟಿಯನ್ನು ಚಾಕುವಿನಿಂದ ಕತ್ತರಿಸಿ ಪರಾರಿಯಾಗಿದ್ದಾನೆ. ಗಾಯಾಳು ಸುನಿತಾರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








