ಮೈಸೂರು :
ಜಿಲ್ಲಾ ಪಂಚಾಯಿತಿ ಚುನಾವಣೆಗಾಗಿ ಸ್ಪರ್ಧಿಸಲು ಹಣಕ್ಕಾಗಿ ಪತಿಯೇ ಪತ್ನಿಯನ್ನು ಬೆಂಕಿ ಹಚ್ಚಿ ಕೊಂದಿರುವ ಘಟನೆ ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ನಾಟನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಾವ್ಯಾರಾಣಿ(28) ಸಾವನಪ್ಪಿದ ಮಹಿಳೆಯಾಗಿದ್ದು, ಈಕೆ 2 ವರ್ಷದ ಹಿಂದೆ ಸಂತೋಷ್ ಎಂಬಾತನನ್ನು ಮದುವೆಯಾಗಿದ್ದಳು. ಸಂತೋಷ್ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ, ಮುಂಬರುವ ಜಿಪಂ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದ ಸಂತೋಷ್, ಹಣಕ್ಕಾಗಿ ಕಾವ್ಯಾ ಅವರನ್ನು ಪೀಡಿಸುತ್ತಿದ್ದ. ತವರುಮನೆಯಿಂದ 15 ಲಕ್ಷ ರೂ. ತರುವಂತೆ ಒತ್ತಡ ಹೇರಿದ್ದ. ಹಣ ತರದೆ ಇದ್ದಾಗ ಪತ್ನಿಗೆ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ.
ಅತ್ತೆ, ಪತಿ,ನಾದಿನಿಯ ಪತಿ ಸೇರಿಕೊಂಡು ಬೆಂಕಿ ಹಚ್ಚಿದ್ದಾರೆ ಎಂದು ಕಾವ್ಯಾರಾಣಿ ಸಾಯುವ ಮುನ್ನ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಘಟನೆ ಸಂಬಂಧ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
