ಅಭಿಮಾನಿಗಳಿಗೆ ದರ್ಶನ್ ಮನವಿ

 ಮೈಸೂರು:

        ಮೈಸೂರಿನಲ್ಲಿ ಚಲನಚಿತ್ರ ನಟ ದರ್ಶನ್ ಕಾರು ಇಂದು ಅಪಘಾತಕ್ಕೀಡಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಅಪಘಾತದಲ್ಲಿ ಗಾಯಗೊಂಡಿರುವ ನಟ ದರ್ಶನ್ ನೋಡಲು ಸಾಕಷ್ಟು ಅಭಿಮಾನಿಗಳು ಧಾವಿಸಿ ಬರುವುದರಿಂದ ಇತರೆ ರೋಗಿಗಳಿಗೆ ತೊಂದರೆಯಾಗುತ್ತದೆ. ದಯವಿಟ್ಟು ಯಾರು ಆಸ್ಪತ್ರೆ ಬಳಿ ಬರಬೇಡಿ ಎಂದು ದರ್ಶನ್ ತಮ್ಮ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ. 

      ಇದೇ ಸಂದರ್ಭದಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ನಟ ದರ್ಶನ್ ಅವರು ನನಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ ಎಂದು ಆಡಿಯೋ ಮೂಲಕ ತನ್ನ ಅಭಿಮಾನಿಗಳಿಗೆ ಮಾಹಿತಿ ನೀಡಿದರು. 

        ಆಸ್ಪತ್ರೆಯಲ್ಲಿ ಬೇರೆ ರೋಗಿಗಳಿಗೆ ತೊಂದರೆಯಾಗಬಾರದು. ಹೀಗಾಗಿ ಯಾರೂ ಆಸ್ಪತ್ರೆ ಬಳಿ ಬರಬೇಡಿ. ದರ್ಶನ್​​ಗೆ ಏನೂ ಆಗಿಲ್ಲ. ಎಲ್ಲರೂ ಆರಾಮಾಗಿರಿ. ಇದು ನನ್ನ ಮನವಿ ಅಂತ ತಿಳಿದುಕೊಳ್ಳಿ. ಇಂದು ಸಂಜೆ ಅಥವಾ ನಾಳೆ ನಿಮ್ಮ ಮುಂದೆ ನಾನೇ ಬರುತ್ತೇನೆ” ಎಂದು ಆಡಿಯೋ ರವಾನಿಸಿದ್ದಾರೆ.

        ವಿ.ವಿ.ಪುರಂ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲಿಸಿ, ಮಹಜರ್ ಮತ್ತು ವಿಡಿಯೋ ಚಿತ್ರೀಕರಣ ಮಾಡಿ, ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ. ಎಂದು ತಿಳಿಸಿದ್ದಾರೆ. 

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap