ಬೆಂಗಳೂರು :
‘ಇನ್ನೂ ಕಾಂಗ್ರೆಸ್ ಪಕ್ಷದ ಬಗ್ಗೆ ನನಗೆ ಅಸಮಾಧಾನವಿದೆ’ ಎಂದು ಕಾಂಗ್ರೆಸ್ ಅತೃಪ್ತ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸಿಎಂ ಬಗ್ಗೆ ನನಗೆ ಬೇಸರವಿಲ್ಲ. ಆದರೆ, ಇನ್ನೂ ಕಾಂಗ್ರೆಸ್ ಬಗ್ಗೆ ಅಸಮಾಧಾನವಿದೆ ಎಂದು ತಿಳಿಸಿದ್ದಾರೆ.
ಸಿಎಂ ಕುಮಾರಸ್ವಾಮಿ, ದೇವೇಗೌಡರ ಜೊತೆಗಿನ ನನ್ನ ಸಂಬಂಧ ಇಂದು ನಿನ್ನೆಯದಲ್ಲ. ಬಹಳ ಹಿಂದಿನಿಂದಲೂ ಅವರೊಂದಿಗೆ ನಾನು ಆಪ್ತ ಸಂಬಂಧ ಹೊಂದಿದ್ದೇನೆ. ಹಾಗಾಗಿ, ಅವರನ್ನು ಭೇಟಿಯಾಗಿ ಬಂದಿದ್ದೇನೆ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ