ಬೆಂಗಳೂರು:
ಮಾಜಿ ಪ್ರಧಾನಿ ದೇವೇಗೌಡ ಅವರು ತುಮಕೂರಿನಿಂದ ಸ್ಪರ್ಧಿಸುವುದಾದರೆ ಸ್ವಾಗತಾರ್ಹ. ಅವರಿಗಾಗಿ ನಾವೆಲ್ಲರೂ ಕೆಲಸ ಮಾಡುತ್ತೇವೆ ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಇಂದು ಕಾಂಗ್ರೆಸ್‌ನ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವೇಗೌಡ ಅವರೇ ತುಮಕೂರಿನಿಂದ ಸ್ಪರ್ಧಿಸುವುದಾದರೆ ಸ್ವಾಗತಾರ್ಹ. ಅವರಿಗಾಗಿ ನಾವೆಲ್ಲರೂ ಕೆಲಸ ಮಾಡುತ್ತೇವೆ. ಆದರೆ ಅವರು ಸ್ಪರ್ಧಿಸದಿದ್ದಲ್ಲಿ ನಮ್ಮ ಹಾಲಿ ಸಂಸದರಿಗೇ ಕ್ಷೇತ್ರ ಬಿಟ್ಟುಕೊಡುವಂತೆ ದೇವೇಗೌಡರಲ್ಲಿಯೂ ಮನವಿ ಮಾಡಿದ್ದೇನೆ. ಅಗತ್ಯ ಬಿದ್ದರೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವೆ. ತುಮಕೂರು ಕ್ಷೇತ್ರ ವಾಪಾಸ್ ಸಿಗುವ ಭರವಸೆ ಇದೆ ಎಂದು ಹೇಳಿದರು.
ತುಮಕೂರು ಲೋಕಸಭಾ ಕ್ಷೇತ್ರ ಮರಳಿ ಪಡೆಯಲು ಕೈ ನಾಯಕರ ಪರದಾಟ ಮುಂದುವರಿದಿದ್ದು, ಹಾಲಿ ಸಂಸದರು ಇರುವ ಕ್ಷೇತ್ರ ಮರಳಿ ಪಡೆಯಲು ಕಾಂಗ್ರೆಸ್ ಮುಖಂಡರು ಯತ್ನ ಮುಂದುವರಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
