ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳೀನ್ ಕುಮಾರ್ ಕಟೀಲ್ : ಅದ್ಧೂರಿ ಸ್ವಾಗತ!!

ಮಂಗಳೂರು: 

      ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಬಿ.ಎಸ್.ಯಡಿಯೂರಪ್ಪ ರವರು ಮುಖ್ಯಮಂತ್ರಿಯಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ.

      ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದ್ದಾರೆ.

     ಈ ವೇಳೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಬಿಜೆಪಿ ಯ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಭರವಸೆಯಿಟ್ಟು ಸ್ಥಾನ ನೀಡಿದ್ದಾರೆ. ಆ ನಿರೀಕ್ಷೆ ಗೆ ಚ್ಯುತಿ ಬಾರದಂತೆ ಕೆಲಸ ಮಾಡಿ, ರಾಜ್ಯದ ಹಿರಿಯ ನಾಯಕರ ಸಲಹೆ ತೆಗೆದುಕೊಂಡು ಪಕ್ಷ ಸಂಘಟನೆ ಮಾಡೋದಾಗಿ ಹೇಳಿದ್ದಾರೆ.

      ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ ಅವಕಾಶ ಸಿಗುತ್ತೆ, ರಾಜ್ಯಾಧ್ಯಕ್ಷ ಪಟ್ಟ ಸಿಗುತ್ತೆ ಎಂಬುದಕ್ಕೆ ನಾನು ಸಾಕ್ಷಿಯಾಗಿದ್ದೇನೆ. ಬಿಜೆಪಿಯಲ್ಲಿ ಕೆಲಸ ಮಾಡುವ ಕಾರ್ಯಕರ್ತರನ್ನು ಗುರುತಿಸುತ್ತಾರೆ. ಸಿಎಂ ಯಡಿಯೂರಪ್ಪ ನನಗೆ ಸಹಕಾರ ನೀಡುತ್ತಾರೆ ಎಂದು ಹೇಳಿದ್ದಾರೆ.

      ಸಿಎಂ ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ, ಜಗದೀಶ್ ಶೆಟ್ಟರ್, ಡಿ.ವಿ. ಸದಾನಂದಗೌಡ, ಪ್ರಹ್ಲಾದ್ ಜೋಶಿ ಸೇರಿದಂತೆ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತೇನೆ.ಎಲ್ಲಾ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

     ಇದೇ ವೇಳೆ ಹಾರ ತುರಾಯಿ ಶಾಲು ಹಾಕುವ ಬದಲು ಆ ಹಣವನ್ನು ರಾಜ್ಯದ ನೆರೆ ಸಂತ್ರಸ್ತರಿಗೆ ನೀಡುವಂತೆ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap