ಬೆಂಗಳೂರು:
ಖಾತೆ ವಿಚಾರದಲ್ಲಿ ನನಗೆ ಯಾವುದೇ ಅಸಮಧಾನವಿಲ್ಲ ಎನ್ನುವ ಮೂಲಕ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಗೃಹ ಖಾತೆಯನ್ನು ಬಿಟ್ಟು ಕೊಡುವ ಸೂಚನೆಯನ್ನು ನೀಡಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾಡತನಾಡಿದ ಡಿಸಿಎಂ ನನಗೆ ತ್ಯಾಗ ಹೊಸತೇನಲ್ಲ. ನಾನು 8 ವರ್ಷಗಳ ಕಾಲ ಪಕ್ಷ ಅಧಿಕಾರದಲ್ಲಿರುವ ವೇಳೆ ಪಕ್ಷದ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ನನಗೆ ತ್ಯಾಗ ಅನ್ನುವುದು ಹೊಸತೇನಲ್ಲ . ಪಕ್ಷ ಏನು ತೀರ್ಮಾನ ಕೈಗೊಳ್ಳುತ್ತದೆ ಅದಕ್ಕೆ ನಾವೆಲ್ಲರೂ ಬದ್ಧರಿದ್ದೇವೆ ಎಂದರು.
ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ನನ್ನ ಯಾವುದೇ ನಡುವೆ ಗಲಾಟೆಯಾಗಿಲ್ಲ. ಇಂದು ಸಂಜೆ ವೇಳೆಗೆ ಸಚಿವರಿಗೆ ಖಾತೆ ಹಂಚಿಕೆಯಾಗಲಿದೆ ಎಂದು ಡಿಸಿಎಂ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ