ನಿಖಿಲ್ ಚುನಾವಣೆಯಲ್ಲಿ ಸೋತರೂ ಸಚಿವ ಸ್ಥಾನ !!?

ಮಂಡ್ಯ :

     ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್‍ಗೆ ವ್ಯತಿರಿಕ್ತವಾಗಿ ಬಂದರೆ, ನಿಖಿಲ್‍ ಕುಮಾರಸ್ವಾಮಿ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

      ಮಂಡ್ಯ ಕಾಂಗ್ರೆಸ್‍ ನ ಸ್ಥಳೀಯ ನಾಯಕರು ಲೋಕಸಭಾ ಚುನಾವಣೆಯಲ್ಲಿ ಕೈಕೊಟ್ಟ ಹಿನ್ನೆಲೆಯಲ್ಲಿ ನಿಖಿಲ್‍ ಗೆ ಹಿನ್ನೆಡೆಯಾದರೆ, ಅವರನ್ನು ವಿಧಾನ ಪರಿಷತ್‍ ಸದಸ್ಯರನ್ನಾಗಿ ಮಾಡಿ ಸಚಿವರನ್ನಾಗಿಸುವ ಮೂಲಕ ಸಕ್ರಿಯ ರಾಜಕಾರಣದಲ್ಲಿರುವಂತೆ ಮಾಡಬೇಕು ಎಂದು ಮಂಡ್ಯದ ಜೆಡಿಎಸ್ ನಾಯಕರು ಒತ್ತಾಯಿಸಿದ್ದಾರೆ. ಈ ಚುನಾವಣೆಯಲ್ಲಿ ನಿಖಿಲ್‍ ಗೆ ಹಿನ್ನಡೆಯಾದ್ರೂ ಅದು ತಾತ್ಕಾಲಿಕ. ಹೀಗಾಗಿ ಅವರು ಮಂಡ್ಯದಲ್ಲಿ ಸಕ್ರಿಯವಾಗಿರಲು ರಾಜಕೀಯ ಸ್ಥಾನಮಾನ ನೀಡಬೇಕು ಎಂಬುದು ಸ್ಥಳೀಯ ಜೆಡಿಎಸ್‍ ನಾಯಕರ ವಾದ.

      ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದರೆ, ಹೈವೋಲ್ಟೇಜ್‍ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್‍ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್‍ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap