ಹಾಸನ:

ನಾನು ಈ ಬಾರಿ ಚುನಾವಣೆಗೆ ನಿಲ್ಲಲ್ಲ. ನಾನು ಸ್ಪರ್ಧೆ ಮಾಡಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರು ತಮ್ಮ ಸ್ಪರ್ಧೆ ಕುರಿತು ಸ್ಪಷ್ಟನೆ ನೀಡಿದ್ದಾರೆ.
ಹಾಸನದ ಹೊಳೆನರಸೀಪುರ ತಾ. ಮೂಡಲಹಿಪ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, “ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತೀರ್ಮಾನಿಸಿದ್ದೇನೆ. ಇನ್ನೂ 28 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್‍ಗೆ ಎಷ್ಟು ಹಾಗೂ ಜೆಡಿಎಸ್‍ಗೆ ಎಷ್ಟು ಎಂಬುದು ತೀರ್ಮಾನ ಆಗಿಲ್ಲ. ಅಂತಿಮವಾದ ಬಳಿಕ ಮಾರ್ಚ್ 15 ರಂದು ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








