ಬೆಂಗಳೂರು :

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ಅವಧಿಯಲ್ಲಿನ ಫೋನ್ ಟ್ಯಾಪಿಂಗ್ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಿದ ಬೆನ್ನಲ್ಲೇ ಐಎಂಎ ಹಗರಣದ ತನಿಖೆಯನ್ನೂ ರಾಜ್ಯ ಸರಕಾರ ಸಿಬಿಐಗೆ ವಹಿಸಿದೆ.
ರಾಜ್ಯ ಪೊಲೀಸ್ ಮತ್ತು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ಐಎಂಎ ಪ್ರಕರಣದ ಕುರಿತು ತನಿಖೆ ನಡೆಸುತ್ತಿತ್ತು. ಹಗರಣದಲ್ಲಿ ರಾಜಕಾರಣಿಗಳು, ಉದ್ಯಮಿಗಳು, ಐಪಿಎಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಅಲ್ಲದೇ ಈ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ ಬಿಜೆಪಿ ನಾಯಕರು ಒತ್ತಾಯಿಸಿದ್ದರು. ಈಗ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿದಿರುವ ಕಾರಣ ಪ್ರಕರಣವನ್ನು ಸಿಬಿಐಗೆ ನೀಡಲಾಗಿದೆ.
ಐಎಂಎ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿರುವ ಬಗ್ಗೆ ರಾಜ್ಯ ಸರ್ಕಾರ ಹೈಕೋರ್ಟ್ಗೆ ಮುಚ್ಚಿದ ಲಗೋಟೆಯಲ್ಲಿ ಮಾಹಿತಿ ನೀಡಿದೆ. ಪ್ರಕರಣವನ್ನು ನೆನ್ನೆಯೇ ಸಿಬಿಐಗೆ ವರ್ಗಾವಣೆ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








