ನವದೆಹಲಿ :
ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಇದೀಗ ಮತ್ತೆ 29 ಸಾವಿರ ಪ್ರಕರಣ ದಾಖಲಾಗುವ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 9 ಲಕ್ಷಕ್ಕೆ ಏರಿಕೆಯಾಗಿದೆ.
Spike of 29,429 #COVID19 cases & 582 deaths reported in the last 24 hours in India.
Total positive cases stand at 9,36,181 including 3,19,840 active cases, 5,92,032 cured/discharged/migrated and 24,309 deaths: Ministry of Health pic.twitter.com/Fr3grdVwDs
— ANI (@ANI) July 15, 2020
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 29,429 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಒಂದೇ ದಿನ 582 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.
ದೇಶದಲ್ಲಿ ಪ್ರಸ್ತುತ 3,19,940 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಈವರೆಗೆ 24 ಸಾವಿರ 309 ರೋಗಿಗಳು ಕೊರೊನಾದಿಂದ ಸಾವನ್ನಪ್ಪಿದ್ದಾರೆ, 5,92,032 ರೋಗಿಗಳು ಚೇತರಿಸಿಕೊಂಡಿದ್ದಾರೆ. ಈ ಮೂಲಕ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,36,181 ಕ್ಕೆ ಏರಿಕೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/06/Corona-kdfj.jpg)