ದೇಶದಲ್ಲಿ ಕೊರೊನಾ ಸಂಖ್ಯೆ ಇಳಿಮುಖ ; ಒಂದೇ ದಿನ 46,791 ಕೇಸ್ ಪತ್ತೆ!!

ಬೆಂಗಳೂರು :

     ದೇಶದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 46,791 ಮಂದಿಗೆ ಸೋಂಕು ತಗುಲಿದೆ.

     ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ, ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 46,791 ಮಂದಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 75,97,064 ಕ್ಕೆ ಏರಿಕೆಯಾಗಿದೆ. ಇದರಲ್ಲಿ ಸದ್ಯ 7,48,538 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

     ಕಳೆದ ಒಂದು ದಿನದಲ್ಲಿ ಭಾರತದಲ್ಲಿ 587 ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 1,15,197 ಕ್ಕೆ ಏರಿಕೆಯಾಗಿದೆ.

      ಮಹಾರಾಷ್ಟ್ರ, ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಭಾರತದಲ್ಲಿ ಸಕ್ರಿಯ ಪ್ರಕರಣಗಳು ಕೂಡ ಕಡಿಮೆಯಾಗುತ್ತಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link