ದೇಶದಲ್ಲಿ 24 ಗಂಟೆಯಲ್ಲಿ ಕೊರೊನಾ ಸೋಂಕಿಗೆ 848 ಮಂದಿ ಸಾವು!!

ನವದೆಹಲಿ : 

     ದೇಶಾದ್ಯಂತ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 60,975 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 

     ಸೋಮವಾರ ಬೆಳಗ್ಗೆ 9 ಗಂಟೆಯಿಂದ ಮಂಗಳವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 848 ಜನರು ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 58390ಕ್ಕೆ ಏರಿಕೆಯಾಗಿದೆ.

      ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 3167324ಕ್ಕೆ ಏರಿಕೆಯಾಗಿದೆ. ಈ ಪೈಕಿ 24,04,585 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 7,04,348 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link