ನವದೆಹಲಿ:
ಭಾರತದಲ್ಲಿ ಒಂದೇ ದಿನ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 20,903 ಸೋಂಕಿತರು ಪತ್ತೆಯಾಗಿದ್ದಾರೆ.
ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಇದೇ ಮೊದಲ ಬಾರಿಗೆ 24 ಗಂಟೆಗಳಲ್ಲಿ ಇಷ್ಟೊಂದು ಪ್ರಕರಣಗಳು ಪತ್ತೆಯಾಗಿವೆ.
India reports 379 deaths and highest single-day spike of 20,903 new #COVID19 cases in the last 24 hours. Positive cases stand at 6,25,544 including 2,27,439 active cases, 3,79,892 cured/discharged/migrated & 18213 deaths: Ministry of Health & Family Welfare pic.twitter.com/tFL7lwp11i
— ANI (@ANI) July 3, 2020
ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 6.25 ಲಕ್ಷಕ್ಕೆ ಹೆಚ್ಚಳವಾಗಿದೆ. 18,213 ಮಂದಿ ಇಲ್ಲಿಯವರೆಗೆ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ 379 ಮಂದಿ ಸಾವನ್ನಪ್ಪಿದ್ದಾರೆ.
ಇನ್ನು ದೇಶದಲ್ಲಿ ಒಟ್ಟು ಸೋಂಕಿತರ ಪೈಕಿ ಶೇ.60 ರಷ್ಟು ಅಂದರೆ 3,79,892 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 2,27,439 ಕೇಸ್ಗಳು ಸಕ್ರಿಯ ಪ್ರಕರಣಗಳಿದ್ದು, ಆಸ್ಪತ್ಪೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಕಿಲ್ಲರ್ ಸೋಂಕಿಗೆ ಬಲಿಯಾದವರ ಸಂಖ್ಯೆ 18,213ಕ್ಕೆ ಏರಿಕೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ