ಸಾಹಿತಿ ಗಿರೀಶ್ ಕಾರ್ನಾಡ್ ನಿಧನ : ಗಣ್ಯರ ಸಂತಾಪ!

ಬೆಂಗಳೂರು:

      ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ನಟ ಗಿರೀಶ್ ಕಾರ್ನಾಡ್ (81) ಅವರು ಸೋಮವಾರ ವಿಧಿವಶರಾಗಿದ್ದಾರೆ.

      ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಗಿರೀಶ್ ಕಾರ್ನಾಡ್ ಅವರು ಸೋಮವಾರ ಮುಂಜಾನೆ ಬೆಂಗಳೂರಿನ ಲಾವೆಲ್ಲಾ ರಸ್ತೆಯ ನಿವಾಸದಲ್ಲಿ ಮೃತಪಟ್ಟಿದ್ದಾರೆ.

      ಗಿರೀಶ್ ಕಾರ್ನಾಡ್ ಅವರ ಅಂತ್ಯಸಂಸ್ಕಾರವನ್ನು ವಿದ್ಯುತ್ ಚಿತಾಗಾರದಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

      ಮಧ್ಯಾಹ್ನದ ಮೇಲೆ ಬೈಯಪ್ಪನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ. ಸಚಿವರು, ಗಣ್ಯರು ಯಾರು ಬರುವುದು ಬೇಡ. ಸಾರ್ವಜನಿಕ ದರ್ಶನ ಇರುವುದಿಲ್ಲ. ಯಾವುದೇ ವಿಧಿ ವಿಧಾನ ಇರುವುದಿಲ್ಲ ಎಂದು ನಿರ್ದೇಶಕ ಕೆ.ಎಂ ಚೈತನ್ಯ ತಿಳಿಸಿದ್ದಾರೆ.

ಗಿರೀಶ್ ಕಾರ್ನಾಡ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ :

      ಬೆಂಗಳೂರು, ಜೂನ್ 10- ಹಿರಿಯ ಸಾಹಿತಿ, ರಂಗಕರ್ಮಿ, ನಟ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

      ಅವರು ಇತಿಹಾಸ, ಪುರಾಣ ಕಥೆಗಳನ್ನು ಆಧರಿಸಿ ಬರೆದ ನಾಟಕಗಳು ಇಂದಿನ ವಸ್ತುಸ್ಥತಿಯನ್ನು ವಿಶ್ಲೇಷಿಸುವ ರೀತಿ ಅಪೂರ್ವವಾದುದು. ಅವರ ನಾಟಕಗಳು ದೇಶ- ವಿದೇಶದ ಹಲವು ಭಾಷೆಗಳಿಗೆ ಅನುವಾದಗೊಂಡು ಪ್ರದರ್ಶನಗೊಂಡವು. ಆ ಮೂಲಕ ಕನ್ನಡ ಸಂಸ್ಕೃತಿಯ ಕಂಪನ್ನು ಜಗತ್ತಿನ ಉದ್ದಗಲಕ್ಕೂ ಪಸರಿಸಿದ ಕೀರ್ತಿ ಅವರದು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

      ಚಲನಚಿತ್ರರಂಗದಲ್ಲಿ ನಟನೆ ಹಾಗೂ ನಿರ್ದೇಶನದಲ್ಲಿ ತಮ್ಮದೇ ಛಾಪು ಮೂಡಿಸಿದರು. ನಾಡಿನ ಸಾಂಸ್ಕೃತಿಕ ವಲಯಕ್ಕೆ ಹೊಸ ಹೊಳಪು ನೀಡಿದ ಅಗಾಧ ಪ್ರತಿಭೆಯನ್ನು ನಾವು ಇಂದು ಕಳೆದುಕೊಂಡಿರುವುದು ಅತ್ಯಂತ ದುಃಖದ ಸಂಗತಿ ಎಂದು ಮುಖ್ಯಮಂತ್ರಿಗಳು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಶ್ರೀ ಬಿ ಎಸ್ ವೈ ಸಂತಾಪ:

      ನಾಡಿನ ಖ್ಯಾತ ಸಾಹಿತಿ, ಪ್ರಸಿದ್ಧ ನಾಟಕಕಾರ ,ಜ್ಞಾನ ಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಾಡ್ ಅವರ ನಿಧನವು ನಾಡಿಗಾದ ಭರಿಸಲಾಗದ ನಷ್ಟ. ಶ್ರೀ ಗಿರೀಶ್ ಕಾರ್ನಾಡ್ ಅವರ ಕೊಡುಗೆಯನ್ನು ವಿಶೇಷವಾಗಿ ರಂಗಭೂಮಿ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಯಾರೂ ಕೂಡ ಮರೆಯಲು ಸಾಧ್ಯವಿಲ್ಲ.ಜೊತೆಗೆ ಸ್ವತಃ ನಟರಾಗಿ ತಮ್ಮ ಪ್ರತಿಭೆಯ ಮೂಲಕ ಪ್ರಸಿದ್ಧಿಯಾಗಿದ್ದರು.
ಅನೇಕ ಸಾಹಿತ್ಯ ಕೃತಿಗಳನ್ನು ನೀಡಿದ ಅವರು ಕನ್ನಡಿಗರು ಹೆಮ್ಮೆಯಿಂದ ಸಾಧಿಸಲು ಸ್ಫೂರ್ತಿ ತುಂಬಿದವರು.

     ನಾಟಕ ಕ್ಷೇತ್ರದ ಸಾಧನೆಯ ಮೂಲಕವೇ ಅತ್ಯುನ್ನತ ಜ್ಞಾನ ಪೀಠ ಪ್ರಶಸ್ತಿಯನ್ನು ಪಡೆದಿದ್ದು ಅವರ ಪ್ರತಿಭೆಗೆ ಸಾಕ್ಷಿ. ಕಾರ್ನಾಡರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಅವರ ಅಪಾರ ಅಭಿಮಾನಿಗಳು,ಬಂಧುಬಳಗಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ತಿಳಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

Recent Articles

spot_img

Related Stories

Share via
Copy link
Powered by Social Snap