ನವದೆಹಲಿ:
ಭಾರತದಲ್ಲಿ ಕೇವಲ ಎರಡೇ ದಿನದಲ್ಲಿ ಲಕ್ಷಕ್ಕೂ ಅಧಿಕ ಸೋಂಕಿತರು ಪತ್ತೆಯಾಗುತ್ತಿದ್ದು, ಇದೀಗ ದೇಶದಲ್ಲಿ ಕೋವಿಡ್ ಕೇಸ್ಗಳ ಸಂಖ್ಯೆ 18 ಲಕ್ಷದ ಗಡಿ ದಾಡಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 52,972 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 771 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
Single-day spike of 52,972 positive cases & 771 deaths in India in the last 24 hours.
India's COVID19 tally rises to 18,03,696 including 5,79,357active cases, 1,186,203 cured/discharged/migrated & 38,135 deaths: Health Ministry pic.twitter.com/OKfjsgwyC9
— ANI (@ANI) August 3, 2020
ಇತ್ತ ಮೃತರ ಸಂಖ್ಯೆ 38 ಸಾವಿರ ತಲುಪಿದೆ. ಇದರೊಂದಿಗೆ ದೇಶದಲ್ಲಿ ಈವರೆಗೂ 18,03,696 ಮಂದಿಗೆ ಸೋಂಕು ತಗುಲಿದ್ದು, 38,135 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 11,86,203 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 5,79,357 ಸಕ್ರಿಯ ಪ್ರಕರಣಗಳು ಇವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ