ಮಂಗಳೂರು:
ದುಬೈ ನಿಂದ ಹೆರಿಗೆಗ ಬಂದಿದ್ದ ಮಹಿಳೆಯೊಬ್ಬರ ಹೊಟ್ಟೆಯಲ್ಲಿಯೆ ಮಗು ಸಾವನ್ನಪ್ಪಿದ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮಂಗಳೂರಿನ ಅಪಾರ್ಟ್ ಮೆಂಟ್ ಗೆ ನೋಟಿಸ್ ಜಾರಿ ಮಾಡಿದೆ.
ಮೇ.12ರಂದು ದುಬೈನಿಂದ ಮಂಗಳೂರಿಗೆ ಗರ್ಭಿಣಿ ಮಹಿಳೆಯೊಬ್ಬರು ಏರ್ ಲಿಫ್ಟ್ ಆಗಿದ್ದರು. ವಿದೇಶದಿಂದ ಬಂದ ಗರ್ಭಿಣಿಯರಿಗೆ ಮೊದಲ ಕೋವಿಡ್ ಟೆಸ್ಟ್ ನೆಗೆಟಿವ್ ಬಂದರೆ ಅವರನ್ನು ಮನೆಗೆ ಕಳುಹಿಸಲು ಸರಕಾರ ನಿರ್ಧರಿಸಿತ್ತು.
ಮೊದಲ ಕೊರೊನಾ ಟೆಸ್ಟ್ ನೆಗೆಟಿವ್ ಬಂದಿತ್ತು. ಹೀಗಾಗಿ ಮಹಿಳೆ ತಾವಿರುವ ಅಪಾರ್ಟ್‌ಮೆಂಟ್‌ಗೆ ತೆರಳಲು ಬಯಸಿದ್ದರು. ಆದ್ರೆ, ಅಪಾರ್ಟ್‌ಮೆಂಟ್ ಅಸೋಸಿಯೇಷನ್ ಪ್ರವೇಶ ನಿರಾಕರಿಸಿದೆ. ಹೀಗಾಗಿ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದೆ ಮಗು ಹೊಟ್ಟೆಯಲ್ಲಿ ಸಾವನ್ನಪ್ಪಿತ್ತು. ಈ ಹಿನ್ನೆಲೆಯಲ್ಲಿ ಅಪಾರ್ಟ್ ಮೆಂಟ್ ಗೆ ಪಾಲಿಕೆ ನೋಟಿಸ್ ಜಾರಿ ಮಾಡಿದೆ.
ಹೀಗಾಗಿ ಪಾಲಿಕೆ ನೋಟಿಸ್ ನೀಡಿದ್ದು, ಮೂರು ದಿನಗಳ ಒಳಗೆ ಸೂಕ್ತ ಸಮಜಾಯಿಷಿ ನೀಡಲು ಸೂಚನೆ ನೀಡಿದೆ. ಇನ್ನು ಪ್ರಕರಣ ದಾಖಲಾಗದ ಹಿನ್ನೆಲೆಯಲ್ಲಿ ದೂರು ನೀಡಿದ್ರೆ ತನಿಖೆ ನಡೆಸಲಾಗುವುದು ಅಂತ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ