ಬೆಂಗಳೂರು :

ಐಪಿಎಲ್ ಬೆಟ್ಟಿಂಗ್ ದಂಧೆ ಮೇಲೆ ಹದ್ದಿನ ಕಣ್ಣಿಟ್ಟಿರುವ ಸಿಸಿಬಿ ಪೊಲೀಸರು ಬೆಟ್ಟಿಂಗ್ ನಡೆಸುತ್ತಿದ್ದ ಐವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಜಮೀರ್, ಲೋಕೇಶ್, ಬಲರಾಮ್ ರೆಡ್ಡಿ, ನಾಗೇಂದ್ರ ಹಾಗೂ ಗಿರೀಶ್ ಎಂದು ಗುರುತಿಸಲಾಗಿದೆ.
ಪಂದ್ಯಾವಳಿ ನಡುವೆಯೇ ಬೆಟ್ಟಿಂಗ್ ದಂಧೆ ಕೂಡ ಜೋರಾಗಿ ಸಾಗಿದೆ. ನಗರದ ನಾಲ್ಕು ಬೆಟ್ಟಿಂಗ್ ಸೆಂಟರ್ಗಳ ಮೇಲೆ ದಾಳಿ ಮಾಡಿರುವ ಸಿಸಿಬಿ ವಿಶೇಷ ವಿಚಾರಣಾ ದಳದ ಪೊಲೀಸರು ಇಂದು ಕೆ.ಆರ್.ಪುರಂ ನಲ್ಲಿ ಕ್ರಿಕೆಟ್ ಬುಕ್ಕಿ ಬಲರಾಮ್ ಮತ್ತು ನಾಗೇಂದ್ರ ಎಂಬಾತನ ಮನೆಯ ಮೇಲೆ ದಾಳಿ ನಡೆಸಿ, ಐವರು ಬುಕ್ಕಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ 21 ಲಕ್ಷ ರೂ. ನಗದು ಹಾಗೂ 16 ಮೊಬೈಲ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








