ಬೆಂಗಳೂರು :
IPL ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರು ಮಂದಿ ಆರೋಪಿಗಳನ್ನು ಬಂಧಿಸಿ, 6 ಲಕ್ಷ ನಗದು ಹಣವನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊರೋನಾ ಸೋಂಕಿನ ಭೀತಿಯ ನಡುವೆಯೂ ಐಪಿಎಲ್ ಕ್ರಿಕೆಟ್ ಶುರುವಾಗಿದೆ. ಇದರ ಬೆನ್ನಲ್ಲೇ ಬೆಟ್ಟಿಂಗ್ ದಂಧೆ ಕೂಡ ಆರಂಭವಾಗಿದೆ.
CCB arrest 6 accused..organising cricket betting during the ongoing IPL..Rs 6 lakhs seized.. further investigation on.. @BlrCityPolice #IPL2020
— Sandeep Patil IPS (@ips_patil) September 23, 2020
ಐಪಿಎಲ್ ಪಂದ್ಯದ ಹೆಸರಿನಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದಾರೆ ಎಂದು ಖಚಿತ ಮಾಹಿತಿ ಪಡೆದ ಪೊಲೀಸರು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯನ್ನು ನಡೆಸುತ್ತಿದ್ದಂತ ಬಾಣಸವಾಡಿ ಹಾಗೂ ಮಲ್ಲೇಶ್ವರಂ ಪೊಲೀಸ್ ಠಾಣೆ ವ್ಯಾಪ್ತಿಯ ಅನೇಕ ಅಡ್ಡೆಗಳ ಮೇಲೆ ದಾಳಿ ನಡೆಸಿ 6 ಮಂದಿಯನ್ನು ಬಂಧಿಸಿ ಅವರ ಬಳಿಯಿಂದ 6 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ