ಬೆಂಗಳೂರು:
ಕಾಂಗ್ರೆಸ್ ನಾಯಕ, ಶಾಸಕ ಡಿಕೆ ಶಿವಕುಮಾರ್ ಜಾರಿ ನಿರ್ದೇಶನಾಲಯ (ಇಡಿ) ಜಾರಿಗೊಳಿಸಿದ್ದ ವಿಚಾರಣೆಯ ಸಮನ್ಸ್ ರದ್ದುಗೊಳಿಸುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ರದ್ದುಗೊಂಡಿದ್ದು, ಇದೀಗ ಮಾಜಿ ಸಚಿವರಿಗೆ ಬಂಧನದ ಭೀತಿ ಎದುರಾಗಿದೆ.
ನಿನ್ನೆ ರಾತ್ರಿ (ಗುರುವಾರ) 10ಕ್ಕೆ ನಾಲ್ವರು ಇಡಿ ಅಧಿಕಾರಿಗಳು ಸದಾಶಿವನಗರದಲ್ಲಿರುವ ಡಿಕೆಶಿ ನಿವಾಸಕ್ಕೆ ಆಗಮಿಸಿದ ಇಡಿ ಅಧಿಕಾರಿಗಳು ಇಂದು ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಡಿಕೆಶಿಗೆ ನೋಟಿಸ್ ಕೊಟ್ಟಿದ್ದಾರೆ. ಹೀಗಾಗಿ ಇಂದು ವಿಚಾರಣೆಗೆ ಹಾಜರಾಗುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಡಿಕೆಶಿ ಜೊತೆ ಅವರ ಆಪ್ತರಾದ ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ಅವರ ಅರ್ಜಿಗಳನ್ನೂ ಹೈಕೋರ್ಟ್ ರದ್ದುಗೊಳಿಸಿದೆ. ಹೀಗಾಗಿ ಇವರೂ ವಿಚಾರಣೆಗೆ ಹಾಜರಾಗಬೇಕಾಗುತ್ತದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
