ಬೆಂಗಳೂರು:
ದೆಹಲಿ ನಿವಾಸದ ಮೇಲೆ ನಡೆದಿದ್ದ ಆದಾಯ ತೆರಿಗೆ ದಾಳಿ ಪ್ರಕರಣವನ್ನು ಕೈಬಿಡುವಂತೆ ಕೋರ್ಟ್ ಮೊರೆ ಹೋಗಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಇಂದು ವಜಾಗೊಳಿಸಿದೆ.
ಡಿ.ಕೆ.ಶಿವಕುಮಾರ್ ಹಾಗೂ ಅವರ ಆಪ್ತರಾದ ಸುನೀಲ್ ಶರ್ಮಾ, ಸಚಿನ್ ನಾರಾಯಣ್, ರಾಜೇಂದ್ರ, ಆಂಜನೇಯ ಅವರ ಮೇಲೆ ಅಕ್ರಮವಾಗಿ ಹಣ ವರ್ಗಾವಣೆ ಹವಾಲಾ ಹಣವನ್ನು ಸಾಗಾಟ ಮಾಡಿದ್ದಾರೆ ಎಂಬ ಆರೋಪವನ್ನು ಆದಾಯ ತೆರಿಗೆ ಇಲಾಖೆ ಹೊರೆಸಿದೆ.
ಆರೋಪದಿಂದ ಕೈಬಿಡುವಂತೆ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ.
ಈ ಹಿಂದೆ ಪ್ರಕರಣ ಕೈಬಿಡುವಂತೆ ಕೋರಿ ಕೆಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಡಿಕೆಶಿಗೆ ಅಲ್ಲಿ ಸಹ ನಿರಾಶೆಯಾಗಿತ್ತು. ಕೆಳ ನ್ಯಾಯಾಲಯ ಅರ್ಜಿ ತಿರಸ್ಕರಿಸಿದ ಬಳಿಕ ಅವರು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಹೈಕೋರ್ಟ್ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನಿಡಿತ್ತು. ಆದರೆ ಮಂಗಳವಾರ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದಾಗಿ ಡಿಕೆಶಿ ಹಾಗೂ ಬೆಂಬಲಿಗರಿಗೆ ಹಿನ್ನಡೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ