ಐಟಿ ದಾಳಿ ಪ್ರಕರಣ: ಡಿಕೆಶಿ ಭವಿಷ್ಯ ಇಂದು ನಿರ್ಧಾರ!!

ನವದೆಹಲಿ : 

      ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ದೆಹಲಿ ನಿವಾಸದ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತೀರ್ಪು ಪ್ರಕಟವಾಗಲಿದೆ.

       ದೆಹಲಿಯ ಡಿ.ಕೆ.ಶಿವಕುಮಾರ್ ಮತ್ತು ಆಪ್ತರ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ 8.59 ಕೋಟಿ ಹಣ ಜಪ್ತಿ ಮಾಡಿದ್ದರು. ಹಣ ಮೂಲದ ಬಗ್ಗೆ ವಿವರಣೆ ನೀಡುವಂತೆ ಡಿ.ಕೆ.ಶಿವಕುಮಾರ್ ಮತ್ತು ಆಪ್ತರಿಗೆ ಇಡಿ ಸಮನ್ಸ್ ನೀಡಿತ್ತು. ಇಡಿ ನೋಟಿಸ್ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಹಾಗೂ ಅವರ ತಂಡ ಹೈಕೋರ್ಟ್ ಮೆಟ್ಟಿಲೇರಿತ್ತು.

      ದೆಹಲಿಯ 4 ಪ್ಲಾಟ್ ಗಳ ಮೇಲೆ ಐಟಿ ಇಲಾಖೆ ದಾಳಿ ವೇಳೆ ಪ್ಲಾಟ್ ಗಳಲ್ಲಿ 8.59 ಕೋಟಿ ರೂ. ಹಣ ಪತ್ತೆಯಾಗಿದ್ದ ಸಂದರ್ಭದಲ್ಲಿ ಸಿಕ್ಕ 41 ಲಕ್ಷ ರೂ. ನನ್ನದೆಂದು ಡಿ.ಕೆ.ಶಿವಕುಮಾರ್ ಒಪ್ಪಿಕೊಂಡಿದ್ದರು. ಹೀಗಾಗಿ ಉಳಿದ 8.81 ಕೋಟಿ ರೂ. ಮೂಲದ ಬಗ್ಗೆ ಐಟಿ ಇಲಾಖೆ ತನಿಖೆ ನಡೆಸುತ್ತಿತ್ತು. ಹೀಗಾಗಿ ಡಿಕೆ ಶಿವಕುಮಾರ್ ಆತಂಕಕ್ಕೊಳಗಾಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap