ಬೆಂಗಳೂರು:
ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರ ಭಾಷಣದ ವೇಳೆ ವ್ಯಕ್ತಿಯೊಬ್ಬ ಜೈ ಶ್ರೀರಾಮ್ ಎಂದು ಕೂಗಿರುವ ಘಟನೆ ಗುರುವಾರ ನಡೆದಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ವೇಳೆಯಲ್ಲಿ ಇವತ್ತು ಗಾಂಧಿ ಎಂದರೆ ಯಾರು? ಶ್ರೀರಾಮ ಅಂದರೆ ಯಾರು ಎಂದು ಕೇಳುವ ಸನ್ನಿವೇಶ ಇದೆ ಎಂದು ಪರಮೇಶ್ವರ್ ಹೇಳುತ್ತಿದ್ದಂತೆ ಸಭಿಕರ ಮಧ್ಯದಿಂದ ವ್ಯಕ್ತಿಯೋರ್ವ ಜೈ ಶ್ರೀರಾಮ್ ಎಂದು ಕೂಗಿದ್ದಾನೆ. ಕೂಡಲೇ ಡಿಸಿಎಂ, ”ಇಷ್ಟು ಹೊತ್ತು ಚೆನ್ನಾಗಿ ಇದ್ಯಲ್ಲಪ್ಪ, ಈಗೇನಾಯ್ತು?” ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ ಸಭಿಕರು ನಗೆಗಡಲ್ಲಿ ತೇಲಿದರು.
ಇನ್ನು ನಮ್ಮ ಮೆಟ್ರೋಗೆ ಕೆಂಪೇಗೌಡ ಹೆಸರಿಡಬೇಕು ಎಂದು ಪಟ್ಟನಾಯಕನಹಳ್ಳಿ ನಂಜಾವಧೂತ ಸ್ವಾಮೀಜಿಯವರು ಸರಕಾರವನ್ನು ಒತ್ತಾಯಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ