ಬೆಂಗಳೂರು :
ಅಯಂಬಿಡೆಂಟ್ ವಂಚನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಜನಾರ್ದನ ರೆಡ್ಡಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಒಂದನೇ ಎಸಿಎಂಎಂ ನ್ಯಾಯಾಲಯದಲ್ಲಿ ಜನಾರ್ದನ ರೆಡ್ಡಿ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆಯು ಇಂದು ಮಧ್ಯಾಹ್ನವೇ ನಡೆಯುವ ಸಾಧ್ಯತೆ ಇದೆ.
ಇವತ್ತಾದರೂ ಜಾಮಿನು ಸಿಗಬಹುದು ಅನ್ನೋ ನಿರೀಕ್ಷೆಯಲ್ಲಿ ಜನಾರ್ದನ ರೆಡ್ಡಿ ಇದ್ದಾರೆ. ನಿನ್ನೆಯೇ ಬೇಲ್ಗಾಗಿ ಜನಾರ್ದನ ರೆಡ್ಡಿ ಅರ್ಜಿ ಸಲ್ಲಿಸಬೇಕಿತ್ತು. ಆದ್ರೆ ಕೇಂದ್ರ ಸಚಿವ ಅನಂತ ಕುಮಾರ್, ನಿಧನ ಹಿನ್ನೆಲೆಯಲ್ಲಿ ಕೋರ್ಟ್ ಕಲಾಪ ನಡೆಯಲಿಲ್ಲ. ಹೀಗಾಗಿ ಇಂದು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ನ್ಯಾಯಾಂಗ ಬಂಧನಕ್ಕೂ ಮುನ್ನ ಜನಾರ್ದನ ರೆಡ್ಡಿ ನಿರೀಕ್ಷಣಾ ಜಾಮೀನು ಹಾಗೂ ಮಧ್ಯಂತರ ಜಾಮೀನುಗಾಗಿ ಅರ್ಜಿ ಸಲ್ಲಿಸಿದ್ದರು. ಮಧ್ಯಂತರ ಜಾಮೀನು ಅರ್ಜಿಯನ್ನು ರೆಡ್ಡಿ ಪರ ವಕೀಲರು ವಾಪಸ್ ಪಡೆದಿದ್ದರು. ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ನವೆಂಬರ್ 12 ಕ್ಕೆ ಮುಂದೂಡಿತ್ತು. ಅಷ್ಟರಲ್ಲೇ ಜನಾರ್ದನ ರೆಡ್ಡಿಯನ್ನ ಸಿಸಿಬಿ ಅರೆಸ್ಟ್ ಮಾಡಿ, ಕೋರ್ಟ್ಗೆ ಹಾಜರು ಪಡಿಸಿತ್ತು. ಸದ್ಯ 14 ದಿನಗಳ ಕಾಲ ನ್ಯಾಯಂಗ ಬಂಧನದಲ್ಲಿರುವ ಜನಾರ್ದನ ರೆಡ್ಡಿ, ಈಗ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ